ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಕೆಜೆ ಜಾರ್ಜ್‌, ಪ್ರಣಬ್ ಮೊಹಂತಿ, ಎಎಂ ಪ್ರಸಾದ್ ವಿರುದ್ಧ ಸಿಬಿಐ ಎಫ್ಐಆರ್

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬೆಂಗಳೂರು ಅಭಿವೃದ್ಧಿ ಸಚಿವ ಕೆಜೆ ಜಾರ್ಜ್ ಮೊದಲನೇ ಆರೋಪಿ ಎಂದು ಎಫ್ಐಆರ್...
ಕೆಜೆ ಜಾರ್ಜ್, ಪ್ರಣಬ್ ಮೊಹಂತಿ, ಎಎಂ ಪ್ರಸಾದ್
ಕೆಜೆ ಜಾರ್ಜ್, ಪ್ರಣಬ್ ಮೊಹಂತಿ, ಎಎಂ ಪ್ರಸಾದ್
ನವದೆಹಲಿ: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬೆಂಗಳೂರು ಅಭಿವೃದ್ಧಿ ಸಚಿವ ಕೆಜೆ ಜಾರ್ಜ್ ಮೊದಲನೇ ಆರೋಪಿ ಎಂದು ಎಫ್ಐಆರ್ ನಲ್ಲಿ ದಾಖಲಿಸಿದೆ. 
ಇದೇ ವೇಳೆ ಪೊಲೀಸ್ ಅಧಿಕಾರಿಗಳಾದ ಐಜಿ ಪ್ರಣಬ್ ಮೊಹಂತಿ 2ನೇ ಆರೋಪಿ ಮತ್ತು ಎಎಂ ಪ್ರಸಾದ್ ಮೂರನೇ ಆರೋಪಿ ಎಂದು ಸಿಬಿಐ ಎಫ್ಐಆರ್ ನಲ್ಲಿ ದಾಖಲಿಸಿದೆ.

ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಕೆಜೆ ಜಾರ್ಜ್, ಪ್ರಣಬ್ ಮೊಹಂತಿ ಮತ್ತು ಎಎಂ ಪ್ರಸಾದ್ ಅವರಿಗೆ ಕ್ಲೀನ್ ಚೀಟ್ ನೀಡಿತ್ತು. ಸಿಐಡಿ ವರದಿಯಲ್ಲಿ ಜಾರ್ಜ್ ಗೆ ಕ್ಲೀನ್ ಚೀಟ್ ನೀಡಿರುವುದನ್ನು ಪ್ರಶ್ನಿಸಿ ಗಣಪತಿ ತಂದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಮನವಿ ಮಾಡಿದ್ದರು. ಅಂತೆ ಸುಪ್ರೀಂ ಕೋರ್ಟ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆದೇಶಿಸಿತ್ತು.
2016ರ ಜುಲೈ 7ರಂದು ಡಿವೈಎಸ್ಪಿ ಗಣಪತಿ ಅವರು ಮಡಿಕೇರಿಯ ವಿನಾಯಕ ಲಾರ್ಡ್ ನಲ್ಲಿ ಆತ್ಮಹತ್ಯೆಗೆ ಶರಣಾಗುವ ಮುನ್ನ ಸ್ಥಳೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮುಂದೆ ನನಗೆ ಏನಾದ್ರೂ ಆದರೆ ಅದಕ್ಕೆ ಕೆಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಪ್ರಣಬ್ ಮೊಹಂತಿ ಮತ್ತು ಅಶಿತ್ ಮೋಹನ್ ಪ್ರಸಾದ್ ಕಾರಣ ಎಂದು ನೇರವಾಗಿ ಆರೋಪಿಸಿದ್ದರು. 

ಈ ಸಂದರ್ಶನದ ಬಳಿಕ ಮಡಿಕೇರಿ ನಗರದ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿದ್ದ ಸಿಐಡಿ ಅಂದು ಸಚಿವರಾಗಿದ್ದ ಕೆಜೆ ಜಾರ್ಜ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಬಿ ರಿಪೋರ್ಟ್ ಸಲ್ಲಿಸಿ ಕ್ಲೀನ್ ಚೀನ್ ನೀಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com