ರಾಜಸ್ತಾನ ಸರ್ಕಾರದ ಸುಗ್ರೀವಾಜ್ಞೆ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ರಾಜಸ್ತಾನ ಸರ್ಕಾರದ ವಿವಾದಾತ್ಮಕ ಕ್ರಿಮಿನಲ್ ಕಾನೂನುಗಳು (ತಿದ್ದುಪಡಿ) ಸುಗ್ರೀವಾಜ್ಞೆ-2017 ಅನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ...
ಸಚಿನ್ ಪೈಲಟ್
ಸಚಿನ್ ಪೈಲಟ್
Updated on: 
ನವದೆಹಲಿ: ರಾಜಸ್ತಾನ ಸರ್ಕಾರದ ವಿವಾದಾತ್ಮಕ ಕ್ರಿಮಿನಲ್ ಕಾನೂನುಗಳು (ತಿದ್ದುಪಡಿ) ಸುಗ್ರೀವಾಜ್ಞೆ-2017 ಅನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ದೆಹಲಿ ಹೈಕೋರ್ಟ್ ಗೆ ಗುರುವಾರ ಅರ್ಜಿ ಸಲ್ಲಿಸಿದ್ದಾರೆ.
ರಾಜಸ್ತಾನ ಸರ್ಕಾರದ ಸುಗ್ರೀವಾಜ್ಞೆ ಕಾನೂನು ಬಾಹಿರ ಮತ್ತು ಅಸಂವಿಧಾನಿಕವಾಗಿದೆ. ಹೀಗಾಗಿ ಅದನ್ನು ಪ್ರಶ್ನಿಸಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದೇವೆ ಮತ್ತು ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಈ ಕೂಡಲೇ ಸುಗ್ರೀವಾಜ್ಞೆಯನ್ನು ಹಿಂಪಡೆಯಬೇಕು ಎಂದು ಸಚಿನ್ ಪೈಲಟ್ ಆಗ್ರಹಿಸಿದ್ದಾರೆ.
ರಾಜಸ್ತಾನದ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಮಾಧ್ಯಮ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಮೂಲಕ ಭ್ರಷ್ಟ ಅಧಿಕಾರಿಗಳ, ನ್ಯಾಯಾಧೀಶರ ರಕ್ಷಣೆಗೆ ಮುಂದಾಗಿದೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.
ಸುಗ್ರೀವಾಜ್ಞೆ ಪ್ರಕಾರ ಅಧಿಕಾರಿಗಳು, ನ್ಯಾಯಾಧೀಶರು ಕರ್ತವ್ಯದಲ್ಲಿದ್ದಾಗ ತೆಗೆದುಕೊಂಡ ಕ್ರಮಗಳ ಬಗ್ಗೆ ಅಥವಾ ಅವರ ವಿರುದ್ಧ ಕೇಳಿ ಬಂದ ಆರೋಪಗಳ ಬಗ್ಗೆ ಸರ್ಕಾರದ ಅನುಮತಿ ಇಲ್ಲದೆಯೇ ತನಿಖೆ ನಡೆಸುವಂತಿಲ್ಲ. ಅಲ್ಲದೆ, ಸರ್ಕಾರ ತನಿಖೆಗೆ ಅನುಮತಿ ನೀಡುವವರೆಗೆ ಆರೋಪಗಳ ಬಗ್ಗೆ ವರದಿ ಮಾಡದಂತೆ ಮಾಧ್ಯಮಗಳಿಗೂ ನಿರ್ಬಂಧ ಹೇರಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com