ದೆಹಲಿಯಲ್ಲಿ ಮತ್ತೆ ಸಮ-ಬೆಸ ನಿಯಮ ಜಾರಿ ಸಾಧ್ಯತೆ

ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಳವಾದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮತ್ತೆ ಸಮ-ಬೆಸ ಸಂಖ್ಯೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಳವಾದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮತ್ತೆ ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ.
ರಾಷ್ಟ್ರರಾಜಧಾನಿಯಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸುವುದಕ್ಕಾಗಿ ಸಮ-ಬೆಸ ನಿಯಮ ಜಾರಿ ಸೇರಿದಂತೆ ಸರ್ಕಾರ ಕೆಲವು ತುರ್ತು ಕ್ರಮಗಳನ್ನು ಕೈಗೊಳ್ಳಲಿದೆ ಎಂದು ದೆಹಲಿ ಸರ್ಕಾರ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ದೆಹಲಿ ಸಾರಿಗೆ ಸಚಿವ ಕೈಲಾಶ್ ಗೇಹ್ಲೋಟ್ ಅವರು ಸಮ-ಬೆಸ ನಿಯಮ ಜಾರಿಗೊಳಿಸುವ ದಿನಾಂಕದ ಬಗ್ಗೆ ನಿರ್ಧರಿಸುವಂತೆ ಸಾರಿಗೆ ಇಲಾಖೆ ಸೂಚಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಳೆದ ವರ್ಷ ಮಾಲಿನ್ಯವನ್ನು ಹತೋಟಿಗೆ ತರುವುದಕ್ಕಾಗಿ ಇಲ್ಲಿನ ಸರ್ಕಾರ ಒಂದು ದಿನ ಸಮ ಮತ್ತು ಇನ್ನೊಂದು ದಿನ ಬೆಸ ಸಂಖ್ಯೆ ಹೊಂದಿರುವ ವಾಹನಗಳನ್ನು ಚಲಾಯಿಸುವಂತೆ ನಿಯಮ ಜಾರಿಗೊಳಿಸಿತ್ತು. ಇದರಿಂದ ರಸ್ತೆಗಳಲ್ಲಿ ವಾಹನ ದಟ್ಟಣೆಯನ್ನೂ, ಇದರೊಟ್ಟಿಗೆ ಮಾಲಿನ್ಯವನ್ನೂ ನಿಯಂತ್ರಿಸಬಹುದು ಎಂಬುದು ಸರ್ಕಾರದ ಯೋಚನೆಯಾಗಿತ್ತು. ಆದರೆ ಈ ಸಂಬಂಧ ದೇಶದಾದ್ಯಂತ ಸಾಕಷ್ಟು ಟೀಕೆಗಳೂ ಹುಟ್ಟಿಕೊಂಡಿದ್ದವು. ಇದೀಗ ಮಾಲಿನ್ಯ ನಿಯಂತ್ರಣಕ್ಕೆ ಬೇರೆ ದಾರಿ ಇಲ್ಲದ ಕಾರಣ ಇದೇ ಪದ್ಧತಿಯನ್ನು ಮತ್ತೊಮ್ಮೆ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com