ನಿನ್ನೆಯಷ್ಟೇ ಖಾಸಗಿ ಮಾಧ್ಯಮವೊಂದರ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶಿವಸೇನೆ ಸಂಸದ ಸಂಜಯ್ ರಾವತ್ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹವಾ ಕುಗ್ಗುತ್ತಿದ್ದು, ದೇಶವನ್ನು ಮುನ್ನಡೆಸುವ ಶಕ್ತಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಹಲವು ಟೀಕೆಗಳು ವ್ಯಕ್ತವಾಗತೊಡಗಿದ್ದು, ಇದೀಗ ಯೂಟರ್ನ್ ಹೊಡೆದ ರಾವತ್, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ವಾಸ್ತವಿಕತೆ ಹಾಗೂ ದೇಶದಲ್ಲಿ ನಿರ್ಮಾಣವಾಗಿರುವ ಪ್ರಸ್ತುತ ವಾತಾವರಣದ ಕುರಿತಂತೆ ನಾನು ಮಾತನಾಡಿದ್ದೆ ಎಂದು ಹೇಳಿದ್ದಾರೆ.