ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ
ಜಮ್ಮು ಮತ್ತು ಕಾಶ್ಮೀರಜ ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ...
ಜಮ್ಮು: ಜಮ್ಮು ಮತ್ತು ಕಾಶ್ಮೀರಜ ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಕಳೆದ ರಾತ್ರಿ ಪಾಕಿಸ್ತಾನ ಸೇನೆ ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಈ ವೇಳೆ ಉಭಯ ಸೇನಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿತ್ತು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ.
ಶೆರ್ ಶಕ್ತಿ, ಮಂಧಾರ್ ಪ್ರದೇಶದಲ್ಲಿರುವ ಕೆರ್ನಿ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಸಣ್ಣ ಹಾಗೂ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಬಳಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.