ಸೋನಿಯಾ ಗಾಂಧಿಗೆ ಅನಾರೋಗ್ಯ, ಗಂಗಾ ರಾಮ್ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು...
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಸಂಜೆ ಐದು ಗಂಟೆ ಸುಮಾರಿಗೆ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿಯ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸರ್ ಗಂಗಾ ರಾಮ್ ಆಸ್ಪತ್ರೆಯ ಹಿರಿಯ ಅಧಿಕಾರಿ ಡಾ. ಡಿ.ಎಸ್‌. ರಾಣಾ ತಿಳಿಸಿದ್ದಾರೆ.
ಸೋನಿಯಾ ಗಾಂಧಿ ಅವರು ಹೊಟ್ಟೆಯ ಆರೋಗ್ಯದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ರಾಣಾ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com