ರಾಹುಲ್, ಮೋದಿ ಸರ್ಕಾರ ಕುರಿತ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಸಂಜಯ್ ರಾವತ್

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರ ಕುರಿತ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಅವರು ಶುಕ್ರವಾರ...
ಶಿವಸೇನೆ ಸಂಸದ ಸಂಜಯ್ ರಾವತ್
ಶಿವಸೇನೆ ಸಂಸದ ಸಂಜಯ್ ರಾವತ್
Updated on: 

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರ ಕುರಿತ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಅವರು ಶುಕ್ರವಾರ ಹೇಳಿದ್ದಾರೆ. 

ನಿನ್ನೆಯಷ್ಟೇ ಖಾಸಗಿ ಮಾಧ್ಯಮವೊಂದರ ಸಂದರ್ಶನವೊಂದರಲ್ಲಿ ಮಾತನಾಡಿದ್ದ ರಾವತ್ ಅವರು, ದೇಶದಲ್ಲಿ ಮೋದಿ ಹವಾ ಕುಗ್ಗುತ್ತಿದ್ದು, ದೇಶವನ್ನು ಮುನ್ನಡೆಸುವ ಶಕ್ತಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಹಲವು ಟೀಕೆಗಳು ವ್ಯಕ್ತವಾಗತೊಡಗಿದ್ದವು. 

ಹೇಳಿಕೆ ಕುರಿತಂತೆ ಇಂದು ಸ್ಫಷ್ಟನೆ ನೀಡಿರುವ ಅವರು, ರಾಹುಲ್ ಗಾಂಧಿ ಹಾಗೂ ಮೋದಿ ಸರ್ಕಾರ ಕುರಿತಂತೆ ನಾನು ಹೇಳಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ವಾಸ್ತವಿಕತೆ ಹಾಗೂ ದೇಶದಲ್ಲಿ ನಿರ್ಮಾಣವಾಗಿರುವ ಪ್ರಸ್ತುತ ವಾತಾವರಣದ ಕುರಿತಂತೆ ನಾನು ಮಾತನಾಡಿದ್ದೆ ಎಂದು ಹೇಳಿದ್ದಾರೆ. 

ಮಾಧ್ಯಮವೊಂದರ ಚರ್ಚೆಯಲ್ಲಿ ನಾನು ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ರಾಹುಲ್ ಗಾಂಧಿ ನಾಯಕತ್ವ ಕುರಿತಂತೆ ನನ್ನ ಪ್ರತಿಕ್ರಿಯೆಯನ್ನು ಕೇಳಲಾಗಿತ್ತು. ಈ ಪ್ರಶ್ನೆಗೆ ಈಗಿರುವುದು ಮೂರು ವರ್ಷಗಳ ಹಿಂದಿದ್ದ ರಾಹುಲ್ ಅಲ್ಲ. ಇದೀಗ ಆತ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾಗಿದ್ದಾರೆ. ಹಲವು ಬದಲಾವಣೆಗಳಾಗಿವೆ. ಭಾರತವನ್ನು ಮುನ್ನಡೆಸುವ ಸಾಮರ್ಥ್ಯ ರಾಹುಲ್ ಗೆ ಇದೆ ಎಂದಿದ್ದೆ. ಇದರ ಅರ್ಥ ರಾಹುಲ್ ಗಾಂಧಿ ಭಾರತದ ಪ್ರಧಾನಮಂತ್ರಿಯಾಗುತ್ತಾರೆಂದಲ್ಲ. ಮೂರು ವರ್ಷಗಳ ಹಿಂದಿದ್ದ ಪರಿಸ್ಥಿತಿ ಈಗಿಲ್ಲ ಎಂದು ಹೇಳಿದ್ದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com