ನಕಲಿ ಮದ್ಯ ಸೇವನೆ: ಬಿಹಾರದಲ್ಲಿ ಐದು ಮಂದಿ ದಾರುಣ ಸಾವು, 9 ಪೊಲೀಸರ ಅಮಾನತು

ನಕಲಿ ಮದ್ಯ ಸೇವಿಸಿ ಐವರು ಸಾವನ್ನಪ್ಪಿದ್ದು 8 ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ನಿತೀಶ್ ಕುಮಾರ್ ಸರ್ಕಾರ ಕಳೆದ ವರ್ಷ ಏಪ್ರಿಲ್ ನಲ್ಲಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಪಾಟ್ನಾ: ನಕಲಿ ಮದ್ಯ ಸೇವಿಸಿ ಐವರು ಸಾವನ್ನಪ್ಪಿದ್ದು 8 ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ನಿತೀಶ್ ಕುಮಾರ್ ಸರ್ಕಾರ ಕಳೆದ ವರ್ಷ ಏಪ್ರಿಲ್ ನಲ್ಲಿ ಬಿಹಾರದಲ್ಲಿ ಸಂಪೂರ್ಣವಾಗಿ ಮಧ್ಯ ಮಾರಾಟ ಹಾಗೂ ಸೇವನೆಯನ್ನು ನಿಷೇಧಿಸಿದೆ.
ಕಚ್ವಾ ಪೊಲೀಸ್ ಠಾಣೆ ಪ್ರದೇಶದಲ್ಲಿ  ನೇಮಕವಾಗಿದ್ದ ಎಲ್ಲಾ ಕಾನ್ ಸ್ಟೇಬಲ್ ಗಳನ್ನು ವರ್ಗಾವಣೆ ಮಾಡಲಾಗಿದೆ. ದಾನ್ವಾರ್ ಗ್ರಾಮಲ್ಲಿ ಐವರು ವ್ಯಕ್ತಿಗಳು ಸಾವನ್ನಪ್ಪಿದ್ದು ಸ್ಥಳಕ್ಕೆ ಡಿಐಜಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅಕ್ರಮ ಮಧ್ಯ ಮಾರಾಟ ಮಾಡಿದ ಮೂವರ ವಿರುದ್ಧ  ಎಫ್ ಐಆರ್ ದಾಖಲಿಸಲಾಗಿದ್ದು ಮೂವರನ್ನು ಶೀಘ್ರವಾಗಿ ಬಂಧಿಸುವುದಾಗಿ ಹೇಳಿದ್ದಾರೆ.
ಮರಣೋತ್ತರ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದು, ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇನ್ನೂ ಅಸ್ವಸ್ಥ ಗೊಂಡಿದ್ದ ಹಲವು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದಲ್ಲಿ ಅಕ್ರಮ ಮಧ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದು. ಸರ್ಕಾರ ಬಡವರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಅರ್ ಜೆಡಿ ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com