ಅಹಮದಾಬಾದ್: ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಲು ಪಟಿದಾರ್ ಮೀಸಲಾತಿ ಹೋರಾಟ ಸಮಿತಿಯ ಮುಖ್ಯಸ್ಥ ಹಾರ್ದಿಕ್ ಪಟೇಲ್ ಅವರು ಕೆಲವು ಬೇಡಿಕೆಗಳನ್ನು ಇಟ್ಟಿದ್ದು, ಪಟಿದಾರ್ ಮೀಸಲಾತಿಗೆ ಸಂಬಂಧಿಸದಂತೆ ನವೆಂಬರ್ 3ರೊಳಗೆ ನಿರ್ಧಾರ ಕೈಗೊಳ್ಳುವಂತೆ ಡೆಡ್ ಲೈನ್ ನೀಡಿದ್ದಾರೆ.