ಸರ್ಕಾರದ ಈ ಹೊಸ ಕಾನೂನಿನ ಅನ್ವಯ ಕಲ್ಲು ತೂರುವ ಮತ್ತು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಅವರಿಗೆ ದಂಡ ಮತ್ತು 5 ವರ್ಷಗಳವರೆಗೂ ಜೈಲು ಶಿಕ್ಷೆ ವಿಧಿಸುವಂತಹ ಕಾನೂನು ರಚಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಈಗಾಗಲೇ ಕಾಶ್ಮೀರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು, ಕಾಶ್ಮೀರ ರಾಜ್ಯಪಾಲ ಎನ್ ಎನ್ ವೋಹ್ರಾ ಅವರು ಇದಕ್ಕೆ ಅನುಮೋದನೆ ಕೂಡ ನೀಡಿದ್ದಾರೆ ಎಂದು ತಿಳಿದುಬಂದಿದೆ. "ಜಮ್ಮು ಮತ್ತು ಕಾಶ್ಮೀರ ಸಾರ್ವಜನಿಕ ಆಸ್ತಿ (ಹಾನಿ ತಡೆಗಟ್ಟುವಿಕೆ) (ತಿದ್ದುಪಡಿ) ಸುಗ್ರೀವಾಜ್ಞೆ, 2017ಕ್ಕೆ ರಾಜ್ಯಪಾಲರು ಸಹಿ ಹಾಕಿದ್ದಾರೆ.