ರಕ್ಷಣಾ ಕ್ಷೇತ್ರದಲ್ಲಿ ಮೇಕ್ ಇನ್ ಇಂಡಿಯಾ ಗೆ ಉತ್ತೇಜನ: ನಿರ್ಮಲಾ ಸೀತಾರಾಮನ್

ಮೇಕ್ ಇನ್ ಇಂಡಿಯಾ ಯೋಜನೆಯನ್ನು ರಕ್ಷಣಾ ಕ್ಷೇತ್ರದಲ್ಲಿ ಉತ್ತೇಜಿಸುವುದಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇಲಾಖೆಗೆ ಭರವಸೆ ನೀಡಿದ್ದಾರೆ.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
ನವದೆಹಲಿ: ಮೇಕ್ ಇನ್ ಇಂಡಿಯಾ ಯೋಜನೆಯನ್ನು ರಕ್ಷಣಾ ಕ್ಷೇತ್ರದಲ್ಲಿ ಉತ್ತೇಜಿಸುವುದಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇಲಾಖೆಗೆ ಭರವಸೆ ನೀಡಿದ್ದಾರೆ. 
ಲೈಸೆನ್ಸಿಂಗ್ ಹಾಗೂ ತೆರಿಗೆ ವಿಷಯಗಳ ಕುರಿತ ಮಿಲಿಟರಿ ಸಂಸ್ಥೆಗಳ ಕಳವಳಕ್ಕೆ ಸಂಬಂಧಿಸಿದಂತೆ ಸೇನಾ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ನಿರ್ಮಲಾ ಸೀತಾರಾಮನ್, ರಕ್ಷಣಾ ಉತ್ಪಾದನಾ ಕ್ಷೇತ್ರದಲ್ಲಿ ಭಾಗಿಯಾಗಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ. 
ರಕ್ಷಣಾ ಕ್ಷೇತ್ರಾದಲ್ಲಿ ಮೇಕ್ ಇನ್ ಇಂಡಿಯಾ ಯೋಜನೆಯ ಬಗ್ಗೆ ಕಾನ್ಫೆಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ)ನ ಪ್ರತಿನಿಧಿಗಳು, ಭಾರತ ಹಾಗೂ ವಿದೇಶಿ ರಕ್ಷಣಾ ಸಾಮಗ್ರಿಗಳ ಉತ್ಪಾದನಾ ಸಂಸ್ಥೆಯವರೊಂದಿಗೂ ನಿರ್ಮಲಾ ಸೀತಾರಾಮನ್ ಚರ್ಚೆ ನಡೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com