ಸೋನಿಯಾ ಗಾಂಧಿ ಗುಣಮುಖ: ಗಂಗಾ ರಾಮ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ....
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
ನವದೆಹಲಿ: ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುಣಮುಖರಾಗಿದ್ದು, ಶನಿವಾರ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಸೋನಿಯಾ ಗಾಂಧಿ ಅವರು ಹೊಟ್ಟೆ ನೋವಿನಿಂದ ಚೇತರಿಸಿಕೊಂಡಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಹೀಗಾಗಿ ಅವರನ್ನು ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಗುಣಮುಖರಾಗಿರುವ ಸೋನಿಯಾ ಅವರಿಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
70 ವರ್ಷದ ಸೋನಿಯಾ ಗಾಂಧಿ ಅವರು ನಿನ್ನೆ ಅನಾರೋಗ್ಯದ ಕಾರಣ ಶಿಮ್ಲಾದಿಂದ ದೆಹಲಿಗೆ ಹಿಂತಿರುಗಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com