ಬಂಡಿಪೋರದಲ್ಲಿ ಎನ್'ಕೌಂಟರ್: ಉಗ್ರರು, ಸೇನಾಪಡೆ ಭಾರೀ ಗುಂಡಿನ ಚಕಮಕಿ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರದಲ್ಲಿ ಉಗ್ರರು ದಾಳಿ ನಡೆಸಿದ್ದು, ಸ್ಥಳದಲ್ಲಿ ಸೇನಾ ಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಭಾನುವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರದಲ್ಲಿ ಉಗ್ರರು ದಾಳಿ ನಡೆಸಿದ್ದು, ಸ್ಥಳದಲ್ಲಿ ಸೇನಾ ಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಭಾನುವಾರ ತಿಳಿದುಬಂದಿದೆ. 

ಬಂಡಿಪೋರಾದ ಹಜಿನ್ ಪ್ರದೇಶದಲ್ಲಿರುವ ಮಿರ್ ಮೊಹಲ್ಲಾದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರ ಸದೆಬಡಿಯಲು  ಸ್ಥಳದಲ್ಲಿ 45 ಬಿಎನ್ ಸಿಆರ್'ಪಿಎಫ್ ಪಡೆ, ವಿಶೇಷ ಸೇನಾ ಪಡೆ ಹಾಗೂ 13 ರಾಷ್ಟ್ರೀಯ ರೈಫಲ್ಸ್ ಭಾರೀ ಕಾರ್ಯಾಚರಣೆ ನಡೆಸುತ್ತಿವೆ ಎಂದು ವರದಿಗಳು ತಿಳಿಸಿವೆ. 

ಸೇನಾಪಡೆ ಕಾರ್ಯಾಚರಣೆಗೆ ಇಳಿಯುತ್ತಿದ್ದಂತೆಯೇ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಸೇನಾಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com