ಈ ಬಗ್ಗೆ ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇಟಲಿ ಪ್ರಧಾನಿಗಳ ಭಾರತ ಭೇಟಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಗಟ್ಟಿಗೊಳಿಸಲಿದೆ. ಅಂತೆಯೇ ಭೇಟಿ ವೇಳೆ ಹಲವು ಒಪ್ಪಂದಗಳ ಕುರಿತು ಚರ್ಚೆ ನಡೆಯಲಿದ್ದು, ಈ ಭೇಟಿಯಿಂದಾಗಿ ಭಾರತ-ಇಟಲಿ ನಡುವಿನ ಆರ್ಥಿಕ ಸಂಬಂಧ ಸುಧಾರಣೆಯಾಗಲಿದೆ ಎಂದು ಹೇಳಿದ್ದಾರೆ.