ಭಯೋತ್ಪಾದನೆಗೆ ಪಾಕ್ ಬೆಂಬಲ ಸ್ವೀಕಾರಾರ್ಹವಲ್ಲ, ಪ್ರತೀಕಾರ ಮುಂದುವರೆಯುತ್ತದೆ: ಭಾರತೀಯ ಸೇನೆ

ಭಯೋತ್ಪಾದನೆಗೆ ಪಾಕಿಸ್ತಾನ ಬೆಂಬಲ ನೀಡುತ್ತಿರುವುದು ಸ್ವೀಕಾರಾರ್ಹವಲ್ಲ ಮತ್ತು ಅಂತಹ ಕೃತ್ಯಗಳಿಗೆ ಪ್ರತಿಕ್ರಿಯಿಸಲು ಭಾರತವು ಪ್ರತೀಕಾರ ಕ್ರಮಗಳನ್ನು...
ಭಾರತೀಯ ಸೇನೆ
ಭಾರತೀಯ ಸೇನೆ
ನವದೆಹಲಿ: ಭಯೋತ್ಪಾದನೆಗೆ ಪಾಕಿಸ್ತಾನ ಬೆಂಬಲ ನೀಡುತ್ತಿರುವುದು ಸ್ವೀಕಾರಾರ್ಹವಲ್ಲ ಮತ್ತು ಅಂತಹ ಕೃತ್ಯಗಳಿಗೆ ಪ್ರತಿಕ್ರಿಯಿಸಲು ಭಾರತವು ಪ್ರತೀಕಾರ ಕ್ರಮಗಳನ್ನು ತೆಗೆದುಕೊಳ್ಳದೇ ಬಿಡುವುದಿಲ್ಲ ಎಂದು ಭಾರತೀಯ ಸೇನೆ ಮುಖ್ಯಸ್ಥರು ಹೇಳಿದ್ದಾರೆ. 
ಭಾರತದ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ಎಕೆ ಭಟ್ ಅವರೊಂದಿಗಿನ ಮಾತುಕತೆ ವೇಳೆ ಪಾಕಿಸ್ತಾನ ಡಿಜಿಎಂಒ ಸಾಹಿರ್ ಶಂಷಾದ್ ಮಿರ್ಜಾ ಅವರು ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತೀಯ ಯೋಧರು ಕದನ ವಿರಾಮ ಉಲ್ಲಂಘಿಸಿ ಅಪ್ರಚೋಧಿತ ಗುಂಡಿನ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. 
ಇದಕ್ಕೆ ಪ್ರತ್ಯುತ್ತರವಾಗಿ ಭಯೋತ್ಪಾದನೆಗೆ ಪಾಕಿಸ್ತಾನ ಸರ್ಕಾರ ಬೆಂಬಲ ನೀಡುತ್ತಿರುವುದು ಸ್ವೀಕಾರಾರ್ಹವಲ್ಲ. ದೇಶದ ಭದ್ರತೆ ದೃಷ್ಟಿಯಿಂದ ಅಂತಹ ಕೃತ್ಯಗಳಿಗೆ ಪ್ರತಿಕ್ರಿಯಿಸಲು ಭಾರತವು ಪ್ರತೀಕಾರ ಕ್ರಮಗಳನ್ನು ತೆಗೆದುಕೊಳ್ಳದೇ ಬಿಡುವುದಿಲ್ಲ ಎಂದು ಎಕೆ ಭಟ್ ಅವರು ಪಾಕಿಸ್ತಾನಕ್ಕೆ ಖಡಕ್ ಸಂದೇಶ ನೀಡಿದ್ದಾರೆ. 
ಭಾರತಕ್ಕೆ ನುಸುಳಲು ಗಡಿಯಲ್ಲಿ ಭಯೋತ್ಪಾದಕರಿಗೆ ಪಾಕಿಸ್ತಾನ ಸೇನೆ ಸಹಾಯ ಮಾಡುತ್ತಿದೆ. ಇದರ ಜತೆಗೆ ಉಗ್ರರಿಗೆ ಪಾಕಿಸ್ತಾನ ಸೇನೆ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದೆ. ಇದೇ ಕಾರಣಕ್ಕಾಗಿ ಗಡಿಯಲ್ಲಿ ನಾವು ಗುಂಡಿನ ದಾಳಿ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. 
ಗಡಿಯಲ್ಲಿ ಶಾಂತಿ ಕಾಪಾಡಲು ಭಾರತೀಯ ಸೇನೆ ತನ್ನ ಪ್ರಯತ್ನಗಳನ್ನು ಮುಂದುವರೆಸಿದರೆ, ಪಾಕಿಸ್ತಾನ ಸೇನೆಯು ಮಾತ್ರ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com