35ಎ ವಿಧಿ ಕುರಿತ ವಿಚಾರಣೆ ಎರಡು ತಿಂಗಳು ಮುಂದೂಡಿದೆ ಸುಪ್ರೀಂ ಕೋರ್ಟ್

ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಿಗೆ ವಿಶೇಷ ಹಕ್ಕುಗಳು ಮತ್ತು ಸೌಕರ್ಯಗಳನ್ನು ನೀಡುವ ಸಂವಿಧಾನದ 35ಎ ವಿಧಿಯ.....
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಿಗೆ ವಿಶೇಷ ಹಕ್ಕುಗಳು ಮತ್ತು ಸೌಕರ್ಯಗಳನ್ನು ನೀಡುವ ಸಂವಿಧಾನದ 35ಎ ವಿಧಿಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಸುಪ್ರೀಂ ಕೋರ್ಟ್‌ ಎರಡು ತಿಂಗಳ ಕಾಲ ಮುಂದೂಡಿದೆ.
ರಾಜಕೀಯ ಲಾಭಕ್ಕಾಗಿ ಕಾನೂನು ಬಾಹಿರವಾಗಿ 35-ಎ ವಿಧಿಯನ್ನು ಸಂವಿಧಾನಕ್ಕೆ ಸೇರಿಸಲಾಗಿದ್ದು, ಇದು ಸಂಸತ್ತಿನ ಅಂಗೀಕಾರ ಪಡೆದಿಲ್ಲ ಎಂದು ಆರೋಪಿಸಿ ದೆಹಲಿಯ "ವೀ ದಿ ಸಿಟಿಜನ್ಸ್‌' ಎಂಬ ಎನ್‌ಜಿಓ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದೆ. ಅಲ್ಲದೆ ಕಾಶ್ಮೀರಕ್ಕೆ ನಿರ್ದಿಷ್ಟವಾದ ಈ ಕಾನೂನನ್ನು ಅನೂರ್ಜಿತಗೊಳಿಸಬೇಕು ಎಂದು ಒತ್ತಾಯಿಸಿದೆ.
35ಎ ವಿಧಿಯನ್ನು ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ನಾಲ್ಕು ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎಎಂ ಖನ್ವಿಲ್ಕರ್ ಮತ್ತು ಡಿವೈ ಚಂದ್ರಚೂಡ್ ಅವರನ್ನೊಳಗೊಂಡ ಪೀಠ, ವಿಚಾರಣೆಯನ್ನು ಎರಡು ತಿಂಗಳ ಕಾಲ ಮುಂದೂಡಿದೆ.
35ಎ ವಿಧಿಯನ್ನು 1954ರಲ್ಲಿ ರಾಷ್ಟ್ರಪತಿಗಳ ಆದೇಶದ ಮೇರೆಗೆ ಸಂವಿಧಾನಕ್ಕೆ ಸೇರಿಸಲಾಗಿತ್ತು. ಈ ವಿಧಿಯು ಜಮ್ಮು ಕಾಶ್ಮೀರ ವಿಧಾನಸಭೆಗೆ, ಸಂವಿಧಾನದ ಸಿಂಧುತ್ವವನ್ನು ಪ್ರಶ್ನಿಸಲಾಗದ ಶಾಸನಗಳನ್ನು ಜಾರಿ ಮಾಡುವ ಅಧಿಕಾರವನ್ನು ನೀಡುತ್ತದೆ.
ಈ ನಡುವೆ ಸುಪ್ರೀಂ ಕೋರ್ಟ್‌ ಒಂದೊಮ್ಮೆ ಅರ್ಜಿದಾರರ ಪರವಾಗಿ ತೀರ್ಪಿತ್ತರೆ ವ್ಯಾಪಕ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಕಾಶ್ಮೀರೀ ಪ್ರತ್ಯೇಕತಾವಾದಿಗಳು ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com