ಗುಜರಾತ್ ಚುನಾವಣೆ ದಿನ ಬಿಜೆಪಿಗೆ ಶಾಕ್ ಕಾದಿದೆ: ರಾಹುಲ್ ಗಾಂಧಿ

Published On :
ಅಹಮದಾಬಾದ್: ಗುಜರಾತ್ ಚುನಾವಣೆಗೆ ಸಜ್ಜುಗೊಂಡಿರುವ ಬಿಜೆಪಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, ಭಾರತದಲ್ಲಿ ಸುಲಭವಾಗಿ ಉದ್ಯಮ ಸ್ಥಾಪಿಸುವ ಪ್ರಕ್ರಿಯೆಯಿಲ್ಲ, ಜಿಎಸ್ ಟಿ ಹಾಗೂ ನೋಟು ನಿಷೇಧ ಎಲ್ಲವನ್ನೂ ಹಾಳುಮಾಡಿದೆ ಎಂದು ಆರೋಪಿಸಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ರಾಹುಲ್ ಗಾಂಧಿ, ಗುಜರಾತ್ ಸಿಎಂ ವಿಜಯ್ ರುಪಾನಿ ವಿರುದ್ಧವೂ ವಾಗ್ದಾಳಿ ನಡೆಸಿದ್ದು, ಜನತೆಯ ಭೂಮಿಯನ್ನು ಕಸಿದು ಟಾಟಾ ಸಂಸ್ಥೆಗೆ ನೀಡಿದ್ದಾರೆ, ಗುಜರಾತ್ ಸರ್ಕಾರ 33,000 ಕೋಟಿಯ ಮೊತ್ತದ ರೈತರ ಸಾಲವನ್ನು ಮನ್ನಾ ಮಾಡಬಹುದಿತ್ತು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 3 ವರ್ಷಗಳು ಕಳೆಯಿತು, ಸ್ವಿಸ್ ಖಾತೆಯಲ್ಲಿ ಕಪ್ಪುಹಣವಿಟ್ಟವರು ಎಷ್ಟು ಜನ ಜೈಲಿಗೆ ಹೋಗಿದ್ದಾರೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಇದೇ ವೇಳೆ ಸುಗಮವಾಗಿ ಉದ್ದಿಮೆ ನಡೆಸಬಹುದಾದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 100 ನೇ ಸ್ಥಾನಕ್ಕೆ ಜಿಗಿದಿರುವುದರ ಬಗ್ಗೆಯೂ ಮಾತನಾಡಿರುವ ರಾಹುಲ್ ಗಾಂಧಿ, ಸುಗಮವಾಗಿ ಉದ್ದಿಮೆ ನಡೆಸಬಹುದಾಗಿರುವುದರ ಹಿಂದಿನ ನೈಜತೆ ಎಲ್ಲರಿಗೂ ತಿಳಿದಿದೆ, ಜೇಟ್ಲಿ ಅವರು ಮಾತ್ರ ಸಂತಸಪಡಲಿ ಎಂದು ಹೇಳಿದ್ದಾರೆ. ಗುಜರಾತ್ ಚುನಾವಣೆಯ ಫಲಿತಾಂಶದ ದಿನ ಬಿಜೆಪಿಗೆ ಅಘಾತ ಎದುರಾಗಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


