ಸಂಗ್ರಹ ಚಿತ್ರ
ದೇಶ
ರಾಜಕೀಯ ಒತ್ತಡಗಳಿಂದ ಸಿಬಿಐ ಸಿಎಂ ಚೌಹಾಣ್ ಅವರಿಗೆ ಕ್ಲೀನ್ ಚಿಟ್ ನೀಡಿದೆ: ಕಾಂಗ್ರೆಸ್
ರಾಜಕೀಯ ಒತ್ತಡಗಳಿಂದ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಸಿಬಿಐ ಕ್ಲೀನ್ ಚಿಟ್ ನೀಡಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ...
ಭೋಪಾಲ್; ರಾಜಕೀಯ ಒತ್ತಡಗಳಿಂದ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಸಿಬಿಐ ಕ್ಲೀನ್ ಚಿಟ್ ನೀಡಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಕೆ.ಕೆ. ಮಿಶ್ರಾ ಅವರು, ಸಿಬಿಐ ರಾಜಕೀಯ ಒತ್ತಡಗಳ ಅಡಿಯಲ್ಲಿ ಕೆಲಸ ಮಾಡುತ್ತಿದೆ. ಸಿಬಿಐ ಕೇವಲ ತನಿಖಾ ದಳವಷ್ಟೇ. ಮುಖ್ಯಮಂತ್ರಿಗಳಿಗೆ ಕ್ಲೀನ್ ಚಿಟ್ ನೀಡಲು ಅದು ನ್ಯಾಯಾಲಯವಲ್ಲ ಎಂದು ಹೇಳಿದ್ದಾರೆ.
ಸಿಬಿಐ ಕೇವಲ ತನಿಖಾ ದಳವಾಗಿದ್ದು, ಸುಪ್ರೀಂಕೋರ್ಟ್ ನಿರ್ದೇಶನದಂತೆ ಅದು ತನ್ನ ಕೆಲಸವನ್ನು ಮಾಡಬೇಕು. ಮುಖ್ಯಮಂತ್ರಿಗಳಿಗೆ ಕ್ಲೀನ್ ಚಿಟ್ ನೀಡಲು ಸಿಬಿಐ ಏನೂ ಅಲ್ಲ. ಈ ಬಗ್ಗೆ ವಿಚಾರಧೀನ ನ್ಯಾಯಾಲಯ ನಿರ್ಧಾರ ಕೈಗೊಳ್ಳಲಿದೆ. ವ್ಯಾಪಂ ಹಗರಣ ತಮಗೆ ದೊಡ್ಡ ಹೊಡೆತ ಎಂದು ಸ್ವತಃ ಮುಖ್ಯಮಂತ್ರಿ ಚೌಹಾಣ್ ಅವರೇ ಒಪ್ಪಿಕೊಂಡಿದ್ದಾರೆ. ರಾಜಕೀಯ ಒತ್ತಡಗಳಿಂದಾಗಿ ಸಿಬಿಐ ಸುಪ್ರೀಂಕೋರ್ಟ್ ಗೆ ತಪ್ಪು ವರದಿಯನ್ನು ಸಲ್ಲಿಸಿ ತಪ್ಪು ಹಾದಿಗೆಳೆಯುತ್ತಿದೆ. ಸುಪ್ರೀಂಕೋರ್ಟ್ ಸಿಬಿಐ ಆಗೌರವ ತೋರುತ್ತಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ