ಉತ್ತರಪ್ರದೇಶದಲ್ಲಿ ಉಷ್ಣ ವಿದ್ಯುತ್ ಸ್ಥಾವರದ ಬಾಯ್ಲರ್ ಸ್ಫೋಟ: 15 ಸಾವು, 100ಕ್ಕೂ ಹೆಚ್ಚು ಗಾಯ

ಉತ್ತರಪ್ರದೇಶದ ರಾಯ್ ಬರೇಲಿಯಲ್ಲಿ ಉಷ್ಣವಿದ್ಯುತ್ ಸ್ಥಾವರದ ಎನ್ ಟಿಪಿಸಿಯ ಉಂಚಾಹರ್ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು ದುರಂತದಲ್ಲಿ 15 ಕಾರ್ಮಿಕರು...
ಉಷ್ಣ ವಿದ್ಯುತ್ ಸ್ಥಾವರ
ಉಷ್ಣ ವಿದ್ಯುತ್ ಸ್ಥಾವರ
ರಾಯ್ ಬರೇಲಿ: ಉತ್ತರಪ್ರದೇಶದ ರಾಯ್ ಬರೇಲಿಯ ರಾಷ್ಟ್ರೀಯ ಉಷ್ಣ ವಿದ್ಯುತ್ ಸ್ಥಾವರದ ಎನ್ ಟಿಪಿಸಿಯ ಉಂಚಾಹರ್ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು ದುರಂತದಲ್ಲಿ 15 ಕಾರ್ಮಿಕರು ಮೃತಪಟ್ಟಿದ್ದಾರೆ. 
500 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಉಷ್ಣ ವಿದ್ಯುತ್ ಸ್ಥಾವರ ಇದಾಗಿದೆ. ಇನ್ನು ಬಾಯ್ಲರ್ ಸ್ಫೋಟದಲ್ಲಿ 15 ಕಾರ್ಮಿಕರು ಮೃತಪಟ್ಟಿದ್ದು 100ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಮಾರಿಷ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ದೂರವಾಣಿ ಮೂಲಕ ದುರಂತದ ಬಗ್ಗೆ ಮಾಹಿತಿ ಪಡೆದಿದ್ದು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. 
ದುರಂತದಲ್ಲಿ ಮೃತಪಟ್ಟವರಿಗೆ ತಲಾ 2 ಲಕ್ಷ. ಗಂಭೀರವಾಗಿ ಗಾಯಗೊಂಡಿರುವವರಿಗೆ 50 ಸಾವಿರ ಹಾಗೂ ಸಣ್ಣಪುಟ್ಟ ಗಾಯಾಳುಗಳಿಗೆ 25 ಸಾವಿರ ಪರಿಹಾರವನ್ನು ಯೋಗಿ ಆದಿತ್ಯನಾಥ ಸರ್ಕಾರ ಘೋಷಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com