ದೇಶಾದ್ಯಂತ ಬಕ್ರೀದ್ ಆಚರಣೆ: ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ

ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬದ ನಿಮಿತ್ತ ದೇಶಾದ್ಯಂತ ಮುಸ್ಲಿಂ ಬಾಂಧವರು ಹಬ್ಬದ ಆಚರಣೆ ಮಾಡುತ್ತಿದ್ದು, ಮುಸ್ಲಿಂ ಬಾಂಧವರು ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ದೆಹಲಿಯ ಐತಿಹಾಸಿಕ ಜಾಮಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ
ದೆಹಲಿಯ ಐತಿಹಾಸಿಕ ಜಾಮಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ
ನವದೆಹಲಿ: ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬದ ನಿಮಿತ್ತ ದೇಶಾದ್ಯಂತ ಮುಸ್ಲಿಂ ಬಾಂಧವರು ಹಬ್ಬದ ಆಚರಣೆ ಮಾಡುತ್ತಿದ್ದು, ಮುಸ್ಲಿಂ ಬಾಂಧವರು ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರ ದಾಳಿ ಆತಂಕದ ನಡುವೆಯೇ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸುತ್ತಿದ್ದು, ಸೇನಾಪಡೆಗಳ ರಕ್ಷಣೆ ನಡುವೆ ಶ್ರೀನಗರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಅಂತೆಯೇ ಇತ್ತ ಪ್ರವಾಹ ಪೀಡಿತ ಬಿಹಾರ, ಉತ್ತರಾಖಂಡ, ಉತ್ತರ ಪ್ರದೇಶದಲ್ಲೂ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸುತ್ತಿದ್ದು, ಮಧ್ಯ ಪ್ರದೇಶದ ಭೋಪಾಲ್ ನ ಈದ್ಘಾ ಮೈದಾನದಲ್ಲಿ ಸಾವಿರಾರು ಮಕ್ಕಳು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದ್ದಾರೆ.
ಇನ್ನು ದೆಹಲಿಯ ಖ್ಯಾತ ಜಾಮಾ ಮಸೀದಿಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದು, ಪ್ರಾರ್ಥನೆಯಲ್ಲಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಸೇರಿದಂತೆ ಹಲವು ಗಣ್ಯರು ಪ್ರಾರ್ಥನೆ ಸಲ್ಲಿಸಿದ್ದಾರೆ. ಇತ್ತ ವಾಣಿಜ್ಯ ನಗರಿ ಮುಂಬೈನಲ್ಲೂ ಪ್ರವಾಹದ ನೀರಿನ ನಡುವೆಯೇ ಮುಸ್ಲಿಂ ಬಾಂಧವರು ಮಾಹಿಮ್ ದರ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಸತತ ಮಳೆ ನಡುವೆಯೂ ಬೆಂಗಳೂರಿನಲ್ಲಿ ಸಾಮೂಹಿಕ ಪ್ರಾರ್ಥನೆ
ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಕ್ರೀದ್ ಹಬ್ಬದ ಆಚರಣೆಗೆ ರಾತ್ರಿ ಇಡೀ ಸುರಿದ ಮಳೆ ಅಡ್ಡಿಯಾಗಿತ್ತು. ನಿನ್ನೆ ತಡರಾತ್ರಿಯಿಂದ ಇಂದು ಬೆಳಗ್ಗೆಯವರೆಗೂ ಸುರಿದ ಮಳೆ ಸಿಲಿಕಾನ್ ಸಿಟಿಯ ಮುಸ್ಲಿಂ ಬಾಂಧವರ ಹಬ್ಬದ ಆಚರಣೆಗೆ ಅಡ್ಡಿಯಾಗಿತ್ತು. ಹೀಗಾಗಿ ಛತ್ರಿ ಹಿಡಿದುಕೊಂಡು ಮಸೀದಿಗೆ ಆಗಮಿಸಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಇದಲ್ಲದೆ ರಾಜ್ಯದ ಉಡುಪಿ, ಮಂಗಳೂರು ಸೇರಿದಂತೆ ವಿವಿದ ಜಿಲ್ಲೆಗಳ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಮುಸ್ಲಿಂ ಧರ್ಮೀಯರ ಪವಿತ್ರ ಬಕ್ರೀದ್ ಹಬ್ಬವನ್ನು ಉಡುಪಿಯಲ್ಲಿ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ದೇಶಾದ್ಯಂತ ನಾಳೆ ಬಕ್ರೀದ್ ಆಚರಿಸಲಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇಂದು ಹಬ್ಬವನ್ನು ಆಚರಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com