ಬಿಹಾರದಲ್ಲಿ ಕಾಂಗ್ರೆಸ್ ಪಕ್ಷದ 27 ಶಾಸಕರ ಪೈಕಿ 14 ಶಾಸಕರು ಪಕ್ಷ ತೊರೆದು ಜೆಡಿಯು ಸೇರುತ್ತಿದ್ದಾರೆ ಎಂದು ತಿಳಿದುಬಂದಿದ್ದು, ಇದರಿಂದ ಬಿಹಾರದಲ್ಲಿ ಕಾಂಗ್ರೆಸ್ ಹೋಳಾಗುವ ಅಪಾಯಕ್ಕೆ ಸಿಲುಕಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಜ್ಯೋತಿರಾಧಿತ್ಯ ಸಿಂಧಿಯಾ ಅವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಿಹಾರಕ್ಕೆ ರವಾನಿಸಿದ್ದಾರೆ.