ಮತ್ತೊಂದೆಡೆ ಇದೇ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಆಯ್ಕೆಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಆಯ್ಕೆಗೆ ಕಾಂಗ್ರೆಸ್ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅನಂತ್ ಕುಮಾರ್ ಹೆಗಡೆ ಮೇಲೆ ಹಲವು ದೂರುಗಳು ದಾಖಲಾಗಿದ್ದು, ಈ ಹಿಂದೆ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪವನ್ನೂ ಕೂಡ ಅವರು ಎದುರಿಸುತ್ತಿದ್ದಾರೆ. ಇಂತಹ ವ್ಯಕ್ತಿಗೆ ಸಚಿವ ಸ್ಥಾನ ನೀಡಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ.