ಸರಗಳ್ಳತನ: ಕಳ್ಳರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿನಿಂದ ಕೆಳಗೆ ಜಿಗಿದ ಮಹಿಳೆ ಸಾವು

ಸರಗಳ್ಳತನ ಮಾಡಲು ದುಷ್ಕರ್ಮಿಗಳು ಯತ್ನ ನಡೆಸುತ್ತಿದ್ದ ವೇಳೆ ಪ್ರತಿರೋಧ ವ್ಯಕ್ತಪಡಿಸುತ್ತಿದ್ದ ಮಹಿಳೆಯೊಬ್ಬರು ಚಲಿಸುವ ರೈಲಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೆಹಲಿ ರೈಲ್ವೇ ನಿಲ್ದಾಣದಲ್ಲಿ ಸೋಮವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಸರಗಳ್ಳತನ ಮಾಡಲು ದುಷ್ಕರ್ಮಿಗಳು ಯತ್ನ ನಡೆಸುತ್ತಿದ್ದ ವೇಳೆ ಪ್ರತಿರೋಧ ವ್ಯಕ್ತಪಡಿಸುತ್ತಿದ್ದ ಮಹಿಳೆಯೊಬ್ಬರು ಚಲಿಸುವ ರೈಲಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೆಹಲಿ ರೈಲ್ವೇ ನಿಲ್ದಾಣದಲ್ಲಿ ಸೋಮವಾರ ನಡೆದಿದೆ. 
ದೆಹಲಿಯ ಸಡರ್ ಬಡಾಪ್ ಸಮೀಪ ಮಿಥಾಯಿ ಪುಲ್ನರ್ ಬಳಿ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಘಟನೆ ನಡೆದಿದೆ. 
ದೆಹಲಿ ವಿಶ್ವವಿದ್ಯಾಲಯದಲ್ಲಿ ಸೀಟು ಪಡೆದುಕೊಂಡಿದ್ದ ಪುತ್ರ ಗೌರವ್ ಜೊತೆಗೆ ಸುಧೀರ್ ಬನ್ಸಾಲ್ (40) ಎಂಬ ಮಹಿಳೆ ರಾಜಸ್ತಾನದ ಯೋಗ ಎಕ್ಸ್ ಪ್ರೆಸ್ ನಲ್ಲಿ  ತೆರಳುತ್ತಿದ್ದರು. ರೈಲಿನ ಪ್ರವೇಶ ದ್ವಾರದಲ್ಲಿ ಮಹಿಳೆ ನಿಂತುಕೊಂಡಿದ್ದರು. ಈ ವೇಳೆ ಸ್ಥಳಕ್ಕೆ ಬಂದಿರುವ ದುಷ್ಕರ್ಮಿಗಳು ಮಹಿಳೆಯ ಬ್ಯಾಗ್ ಹಾಗೂ ಸರ ಕಸಿದುಕೊಳ್ಳಲು ಯತ್ನಿಸಿದ್ದಾರೆ. 
ಈ ವೇಳೆ ನಿಯಂತ್ರಣ ತಪ್ಪಿರುವ ಮಹಿಳೆ ರೈಲ್ವೇ ಹಳಿಯ ಮೇಲೆ ಬಿದ್ದಿದ್ದಾರೆ. ಮಹಿಳೆಯನ್ನು ರಕ್ಷಿಸಲು ಅವರ ಪುತ್ರ ಸಾಕಷ್ಟು ಯತ್ನ ನಡೆಸಿದ್ದಾರೆ. ಆದರೆ, ಯತ್ನ ವಿಫಲಾಗಿತ್ತು. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಪರಿಣಾಮ ಮಹಿಳೆ ಮಾರ್ಗದ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ದುಷ್ಕರ್ಮಿಗಳು ಬ್ಯಾಗ್ ಕಸಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದುಷ್ಕರ್ಮಿಗಳಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com