ದೆಹಲಿ: ಮೂವರು ಅಂಧ ವಿದ್ಯಾರ್ಥಿಗಳ ಮೇಲೆ ಅತ್ಯಾಚಾರವೆಸಗಿದ ಬ್ರಿಟನ್‌ ವ್ಯಕ್ತಿಯ ಬಂಧನ

ದೆಹಲಿಯ ರಾಷ್ಟ್ರೀಯ ಅಂಧರ ಸಂಸ್ಥೆ(ಎನ್‌ಎಬಿ)ಯ ಮೂವರು ಅಂಧ ವಿದ್ಯಾರ್ಥಿಗಳ ಮೇಲೆ ಅತ್ಯಾಚಾರವೆಸಗಿದ ಆರೋಪದ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ದೆಹಲಿಯ ರಾಷ್ಟ್ರೀಯ ಅಂಧರ ಸಂಸ್ಥೆ(ಎನ್‌ಎಬಿ)ಯ ಮೂವರು ಅಂಧ ವಿದ್ಯಾರ್ಥಿಗಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಬ್ರಿಟನ್‌ ಮೂಲದ ವ್ಯಕ್ತಿಯನ್ನು ಸೋಮವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ದೆಹಲಿ ಪೊಲೀಸರ ಪ್ರಕಾರ, ಮೂವರು ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಹು ರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಇಂಗ್ಲೆಂಡ್ ನ ಮರ್ರೇ ಡೆನಿಸ್ ವಾರ್ಡ್‌(54) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕಳೆದ ಏಳು-ಎಂಟು ವರ್ಷಗಳಿಂದ ಅಂಧರ ಸಂಸ್ಥೆಗೆ ಧನ ಸಹಾಯ ಮಾಡುತ್ತಿದ್ದ ಮರ್ರೇ, ಸಂಸ್ಥೆಯ ಕಚೇರಿಗೆ ಹಾಗಾಗ ಭೇಟಿ ನೀಡುತ್ತಿದ್ದ. ಶನಿವಾರ ಸಂಜೆ ಕನಿಷ್ಠ ಮೂವರು ಮಕ್ಕಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ವಿಚಾರವನ್ನು ಮಕ್ಕಳು ತಮ್ಮ ಶಿಕ್ಷಕರಿಗೆ ತಿಳಿಸಿದ್ದು, ಶಿಕ್ಷಕರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿರುವುದಾಗಿ ದೆಹಲಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಮರ್ರೇ ವಾರ್ಡ್‌ನ ಲ್ಯಾಪ್‌ ಟಾಪ್‌ನಲ್ಲಿ ಹಲವು ಆಕ್ಷೇಪಾರ್ಹ ವಿಡಿಯೊಗಳಿರುವುದು ಕಂಡು ಬಂದಿವೆ. ಆತ ಶಿಶುಕಾಮಿ ಆಗಿರಬಹುದು. ಮೊಬೈಲ್‌ ಫೋನ್‌ ಅನ್ನೂ ವಶಕ್ಕೆ ಪಡೆದು ತಪಾಸಣೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್‌ ಆಯುಕ್ತ ಚಿನ್ಮಯ್‌ ಬಿಸ್ವಾಲ್‌ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com