ಫರೂಕಾಬಾದ್ ದುರಂತ: ಉಸಿರಾಟದ ತೊಂದರೆಯಿಂದ ಮಕ್ಕಳು ಮೃತಪಟ್ಟಿದ್ದಾರೆ; ವೈದ್ಯರು

ಇಲ್ಲಿನ ರಾಮ್ ಮನೋಹರ್ ಲೋಹಿಯಾ ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳ ಸಾವಿಗೆ ಆಮ್ಲಜನಕದ ...
ರಾಮ್ ಮನೋಹರ್ ಲೋಹಿಯಾ ಜಿಲ್ಲಾಸ್ಪತ್ರೆಯ ವೈದ್ಯ ಡಾ.ಕೈಲಾಶ್ ಕುಮಾರ್
ರಾಮ್ ಮನೋಹರ್ ಲೋಹಿಯಾ ಜಿಲ್ಲಾಸ್ಪತ್ರೆಯ ವೈದ್ಯ ಡಾ.ಕೈಲಾಶ್ ಕುಮಾರ್
ಫರೂಕಾಬಾದ್ (ಉತ್ತರ ಪ್ರದೇಶ): ಇಲ್ಲಿನ ರಾಮ್ ಮನೋಹರ್ ಲೋಹಿಯಾ ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳ ಸಾವಿಗೆ ಆಮ್ಲಜನಕದ ಕೊರತೆ ಕಾರಣ ಎಂಬ ಆರೋಪವನ್ನು ವೈದ್ಯರು ತಳ್ಳಿ ಹಾಕಿದ್ದಾರೆ.
ಮಕ್ಕಳು ಆಮ್ಲಜನಕದ ಕೊರತೆಯಿಂದ ಮೃತಪಟ್ಟಿಲ್ಲ. ಆಸ್ಪಿಕ್ಸಿಯಾ(ತಾಯಿಯ ಹೆರಿಗೆ ಸಂದರ್ಭದಲ್ಲಿ ಮಗುವಿನ ಮೆದುಳಿನಲ್ಲಿ ಆಕ್ಸಿಜನ್ ಕೊರತೆ)ದಿಂದ ಉಸಿರಾಟದ ತೊಂದರೆಯುಂಟಾಗಿ ಮಕ್ಕಳು ಮೃತಪಟ್ಟಿದ್ದಾರೆ ಎಂದು ಡಾ.ಕೈಲಾಶ್ ಕುಮಾರ್ ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಕಳೆದ ತಿಂಗಳು ಉತ್ತರ ಪ್ರದೇಶದ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಗೋರಕ್ ಪುರ ದುರಂತದಲ್ಲಿ 70ಕ್ಕೂ ಅಧಿಕ ಮಕ್ಕಳು ಮೃತಪಟ್ಟ ಘಟನೆ ನಂತರ ಇದೀಗ ಫರುಕಾಬಾದ್ ಜಿಲ್ಲೆಯ ರಾಮ್ ಮನೋಹರ್ ಲೋಹಿಯಾ ಜಿಲ್ಲಾಸ್ಪತ್ರೆಯಲ್ಲಿ ಕೂಡ ಅಂತಹದ್ದೇ ಘಟನೆ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com