ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ನ ಷೇಂಗಗುಂಡ್ ಪ್ರದೇಶ ದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಈ ಹಿನ್ನಲೆಯಲ್ಲಿ ಸೇನಾ ಪಡೆ ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆಯಷ್ಟೇ ಜಮ್ಮು ಮತ್ತು ಕಾಶ್ಮೀರರದ ಕುಪ್ವಾರ ಜಿಲ್ಲೆಯ ಚಟ್ಕಾಡಿ ಮತ್ತು ಸಡಿಪೋರಾದಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಭಾರತೀಯ ಸೇನಾಪಡೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಇದಕ್ಕೂ ಮುನ್ನ ಕೃಷ್ಣಘಾಟಿ ಸೆಕ್ಟರ್, ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆಯಲ್ಲೂ ಕದನ ವಿರಾಮ ಉಲ್ಲಂಘನೆ ಮಾಡಿತ್ತು.