ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಈ ವೇಳೆ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಕೆಲ ಕಾಲ ಗುಂಡಿನ ಕಾಳಗ ನಡೆದಿದ್ದು, ಸೇನಾ ಪಡೆಗಳು ನಡೆಸಿರುವ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಹತರಾಗಿದ್ದಾರೆಂದು ತಿಳಿದುಬಂದಿದೆ.