ಇಟಾನಗರ: ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅರುಣಾಚಲ ಪ್ರದೇಶ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೋಮ್ಡೆ ಕೇನಾ ಗುವಾಹಟಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
52 ವರ್ಷದ ಕೇನಾ ಜೆನ್ಸಿ ಗ್ರಾಮದವರಾಗಿದ್ದರು. ಕಳೆದ ಒಂದು ತಿಂಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿತಿತ್ಸೆ ಪಡೆಯುತ್ತಿದ್ದರು.ಕಳೆದ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ಕೇನಾ ಲಿಕಾಬಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 2004 ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಶಾಸಕನಾಗಿ ಆಯ್ಕೆಯಾಗಿದ್ದರು. ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ.