ನವದೆಹಲಿ: ವಿವಾದಿತ ಸ್ವಯಂಘೋಷಿತ ದೇವ ಮಹಿಳೆ ರಾಧೆ ಮಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ ಪಂಜಾಬ್ ಪೊಲೀಸರಿಗೆ ಆದೇಶಿಸಿದೆ.
ತಮ್ಮ ವಿರುದ್ಧ ಮಾತನಾಡದಂತೆ ರಾಧೆ ಮಾ ಬೆದರಿಕೆ ಹಾಕುತ್ತಿರುವುದಾಗಿ ಆರೋಪಿಸಿ ವಿಶ್ವ ಹಿಂದೂ ಪರಿಷತ್ ಮಾಜಿ ಸದಸ್ಯ ಸುರೇಂದ್ರ ಮಿತ್ತಲು ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಮಿತ್ತಲ್ ದೂರಿನ ಆಧಾರದ ಮೇಲೆ ರಾಧೆ ಮಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದೆ.
2016ರಲ್ಲಿ ಸ್ವಯಂಘೋಷಿತ ದೇವಮಹಿಳೆ ಮಿತ್ತಲ್ ಅವರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಆಡಿಯೋ ಟೆಪ್ ವೊಂದ ಬಹಿರಂಗಗೊಂಡಿತ್ತು. ಬಳಿಕ ಸಂಕಷ್ಟಕ್ಕೆ ಸಿಲುಕಿದ್ದ ರಾಧೆ ಮಾ ಮಿತ್ತಲ್ ಗೆ ಬೆದರಿಕೆ ಹಾಕಿದ್ದಾಳೆ ಎಂದು ಆರೋಪಿಸಲಾಗಿದೆ.
ರಾಧೆ ಮಾ ವಿರುದ್ಧ ಈಗಾಗಲೇ ವಂಚನೆ ಮತ್ತು ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಆರೋಪಿಗೆ ಬಾಂಬ್ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.