ಶಿಕ್ಷಕರ ದಿನಾಚರಣೆ: ಆದರ್ಶ ಶಿಕ್ಷಕ ಸರ್ವಪಲ್ಲಿ ರಾಧಾಕೃಷ್ಣನ್'ಗೆ ಪ್ರಧಾನಿ ಮೋದಿ ನಮನ

ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಭಾರತ ಕಂಡ ಶ್ರೇಷ್ಠ ಹಾಗೂ ಆದರ್ಶ ಶಿಕ್ಷಕ ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ಸಮರ್ಪಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ: ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಭಾರತ ಕಂಡ ಶ್ರೇಷ್ಠ ಹಾಗೂ ಆದರ್ಶ ಶಿಕ್ಷಕ ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ಸಮರ್ಪಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ಶಿಕ್ಷಕರ ಸಮುದಾಯಕ್ಕೆ ಈ ಮೂಲಕ ಶುಭಾಶಯಗಳನ್ನು ಕೋರುತ್ತಿದ್ದೇನೆ. ನವ ಭಾರತದ ಕನಸಿಗೆ ಶಿಕ್ಷಕರು ಕೇಂದ್ರ ಹಾಗೂ ಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆಂದು ಹೇಳಿದ್ದಾರೆ. 

ಸಮಾಜದಲ್ಲಿ ಶಿಕ್ಷಣದ ಸಂತೋಷವನ್ನು ಹಂಚುತ್ತಿರುವ ಹಾಗೂ ಶಿಕ್ಷಣ ಮನಸ್ಸನ್ನು ಬೆಳಸುತ್ತಿರುವ ಶಿಕ್ಷಣ ಸಮುದಾಯಕ್ಕೆ ಸೆಲ್ಯೂಟ್ ಹೊಡೆಯುತ್ತೇನೆಂದು ತಿಳಿಸಿದ್ದಾರೆ. ಇದೇ ವೇಳೆ ಶಿಕ್ಷಕ, ವಿದ್ವಾಂಸ ಮತ್ತು ಮುತ್ಸದ್ದಿಯಾಗಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ನಮನ ಸಲ್ಲಿಸಿದ್ದಾರೆ. 

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಭಾರತದ 2ನೇ ರಾಷ್ಟ್ರಪತಿಯಾಗಿದ್ದರು. 1962ರಲ್ಲಿ ಭಾರತದ ಶಿಕ್ಷಕನೊಬ್ಬ ಮೊಟ್ಟಮೊದಲ ಉಪರಾಷ್ಟ್ರಪತಿಯಾಗಿ ನೇಮಕಕೊಂಡ ರಾಧಾಕೃಷ್ಣನ್ ಅವರು, ರಾಜ್ಯಸಭೆಯಲ್ಲಿ ಸಂಸ್ಕೃತ ಶ್ಲೋಕಗಳ ಮೂಲಕ ಎಲ್ಲಾ ಸಂಸತ್ ಸದಸ್ಯರ ಗಮನ ಸೆಳೆಯುತ್ತಿದ್ದರು. ರಾಧಾಕೃಷ್ಣನ್ ಅವರ ಅಪಾರ ಸೇವೆಯನ್ನು ಗುರ್ತಿಸಿ ಗೌರವಿಸಿದ್ದ ಭಾರತ ಸರ್ಕಾರ ಉಪರಾಷ್ಟ್ರಪತಿ ಹುದ್ದೆಯಲ್ಲಿದ್ದಾಗಲೇ ಅವರಿಗೆ 1954ರಲ್ಲಿ ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com