ಕಳೆದ ವರ್ಷ ಭಾರತದ ರಸ್ತೆ ಅಪಘಾತಗಳಲ್ಲಿ ಪ್ರತಿ ಗಂಟೆಗೆ 17 ಮಂದಿ ಸಾವು: ವರದಿ

ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಪ್ರತಿ ಮೂರು ನಿಮಿಷಕ್ಕೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಪ್ರತಿ ಮೂರು ನಿಮಿಷಕ್ಕೆ ಒಬ್ಬ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿರುವ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ.
ಈ ಹಿಂದಿನ ವರ್ಷಕ್ಕೆ ಹೋಲಿಕೆ ಮಾಡಿದರೆ 2016ರಲ್ಲಿ ಅಪಘಾತಗಳಲ್ಲಿ ಮೃತಪಟ್ಟವರ ಸಂಖ್ಯೆ ಶೇ.3.2ರಷ್ಟು ಹೆಚ್ಚಾಗಿದ್ದು, ಅತೀಯಾದ ವೇಗವೇ ಈ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 2016ರ ಅಪಘಾತಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕಳೆದ ವರ್ಷ ತಮಿಳುನಾಡಿನಲ್ಲಿ ಅತಿ ಹೆಚ್ಚು ಅಪಘಾತಗಳು ಸಂಭವಿಸಿವೆ. ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದೆ. ಇನ್ನು ಮೆಟ್ರೊಪೊಲಿಟನ್ ನಗರಗಳ ಪೈಕಿ ದೆಹಲಿ ಮೊದಲ ಸ್ಥಾನದಲ್ಲಿದೆ.
2015ರಲ್ಲಿ ಅಪಘಾತಗಳ ಸಂಖ್ಯೆ ಶೇ.4ರಷ್ಟು ಕಡಿಮೆ ಇದೆ ಆದರೆ ಅಪಘಾತಗಳಲ್ಲಿ ಮೃತಪಟ್ಟವರ ಸಂಖ್ಯೆ ಹೆಚ್ಚಾಗಿದೆ. 2015ರಲ್ಲಿ ಒಟ್ಟು 5 ಲಕ್ಷ ಅಪಘಾತಗಳು ಸಂಭವಿಸಿದ್ದು, 2016ರಲ್ಲಿ 4.8ಲಕ್ಷ ಅಪಘಾತಗಳು ಸಂಭವಿಸಿದೆ. ಟ್ರಕ್ ಮತ್ತು ಕಾರುಗಳಿಗಿಂತ ದ್ವಿಚಕ್ರ ವಾಹನಗಳು ಹೆಚ್ಚು ಅಪಘಾತಕ್ಕೀಡಾಗಿದ್ದು, ಕಳೆದ ವರ್ಷ ಒಟ್ಟಾರೆ ಶೇ.34 ರಷ್ಟು ದ್ವಿಚಕ್ರ ವಾಹನಗಳು ಅಪಘಾತಕ್ಕೀಡಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com