ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, ನರೇಂದ್ರ ಮೋದಿ ಅವರು ಈ ದೇಶದ ಪ್ರಧಾನಿಗಳಾಗಿದ್ದಾರೆ. ಅವರು ಈಗ ಯಾವುದೇ ಒಂದು ಪಕ್ಷಕ್ಕೆ ಸೀಮಿತರಾದವರಲ್ಲ. ಪತ್ರಕರ್ತೆ ಹತ್ಯೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಳೆದು ತರುತ್ತಿರುವುದು ಸರಿಯಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದು, ಅಲ್ಲಿನ ಕಾನೂನು ಸುವ್ಯವಸ್ಥೆ ಜವಾಬ್ದಾರಿ ಅಲ್ಲಿನ ರಾಜ್ಯ ಸರ್ಕಾರದ್ದೇ ಆಗಿರುತ್ತದೆ. ಹೀಗಾಗಿ ಪ್ರಕರಣದಲ್ಲಿ ಪ್ರಧಾನಿ ಮೋದಿ ಅವರನ್ನು ಟೀಕಿಸುವುದು ಸರಿಯಲ್ಲ ಎಂದು ಗಡ್ಕರಿ ಹೇಳಿದ್ದಾರೆ.