ಪುಲ್ವಾಮ ಜಿಲ್ಲೆಯಲ್ಲಿ ನಡೆದಿದ್ದ ಉಗ್ರರ ದಾಳಿ ಸಂಬಂಧ ಈಗಾಗಲೇ ಪಾಕಿಸ್ತಾನ ರಾಯಭಾರಿ ಹೈದರ್ ಶಾ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಭಾರತದ ಗಡಿ ನುಸುಳಿಸಿದ್ದಕ್ಕೆ ತೀವ್ರ ಪ್ರತಿಭಟನೆ ದಾಖಲಿಸಲಾಗಿದೆ. ಪಾಕಿಸ್ತಾನ ತನ್ನ ಬದ್ಧತೆಗಳನ್ನು ಅನುಸರಿಸಬೇಕಿದ್ದು, ತನ್ನ ಭೂಮಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿರುವ ಉಗ್ರರು ಭಾರತದ ಗಡಿ ನುಸುಳಿಸಬಾರದು ಹಾಗೂ ಗಡಿ ನುಸುಳುವಿಕೆ ತಡೆಗಟ್ಟಲು ಸೂಕ್ತ ರೀತಿಯ ಕ್ರಮ ಕೈಗೊಳ್ಳುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ ಎಂದು ಸಚಿವಾಲಯ ಹೇಳಿಕೊಂಡಿದೆ.