ಪ್ರಜಾಪ್ರಭುತ್ವಕ್ಕೆ ಅತ್ಯಂತ ದುಃಖದ ದಿನ: ಪಿಸಿಐ ಅಧ್ಯಕ್ಷ ಗೌತಮ್ ಲಹಿರಿ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿರುವ ಪ್ರೆಸ್ ಕ್ಲಬ್ ಆಫ್ ಇಂಡಿಯಾದ...
ಪ್ರೆಸ್ ಕ್ಲಬ್ ಆಫ್ ಇಂಡಿಯಾ ಅಧ್ಯಕ್ಷ ಗೌತಮ್ ಲಹಿರಿ
ಪ್ರೆಸ್ ಕ್ಲಬ್ ಆಫ್ ಇಂಡಿಯಾ ಅಧ್ಯಕ್ಷ ಗೌತಮ್ ಲಹಿರಿ
ನವದೆಹಲಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿರುವ ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಅಧ್ಯಕ್ಷ ಗೌತಮ್ ಲಹಿರಿ, ಪ್ರಜಾಪ್ರಭುತ್ವದಲ್ಲಿ ಇದೊಂದು ದುಃಖದ ದಿನ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಅಧ್ಯಕ್ಷರಾಗಿ, ಈ ಹತ್ಯೆ ದೇಶದ ಪ್ರಜಾಪ್ರಭುತ್ವ ಮತ್ತು ಪತ್ರಿಕಾ ಸ್ವಾತಂತ್ರ್ಯಕ್ಕೆ ಅತ್ಯಂತ ದುಃಖದ ದಿನ ಎಂದು ಭಾವಿಸುತ್ತೇನೆ. ದೇಶದಲ್ಲಿನ ತಪ್ಪುಗಳನ್ನು ಬಹಿರಂಗಪಡಿಸುತ್ತಿದ್ದ ಪತ್ರಕರ್ತೆಯ ಹತ್ಯೆಯಾಗಿದೆ. ಪತ್ರಕರ್ತನಾಗಿ ಈ ಘಟನೆಯನ್ನು ಸ್ವೀಕರಿಸಲು ಕಷ್ಟವಾಗುತ್ತಿದೆ ಎಂದರು.
ಗೌರಿ ಲಂಕೇಶ್ ಹತ್ಯೆಯನ್ನು ದೇಶದ ಎಲ್ಲಾ ಪತ್ರಕರ್ತರು ಖಂಡಿಸಲು ಮುಂದೆ ಬರಬೇಕು. ಹತ್ಯೆ ಮಾಡಿದ ಆರೋಪಿಗಳನ್ನು ಶೀಘ್ರವೇ ಬಂಧಿಸಲು ಒತ್ತಾಯಿಸಬೇಕೆಂದು ಅವರು ಹೇಳಿದರು.
ಈ ಹತ್ಯೆ ಹೇಗೆ ನಡೆಯಿತು ಎಂಬುದನ್ನು ಸರ್ಕಾರ ವಿವರಿಸಬೇಕು ಮತ್ತು ಅಪರಾಧಿಗಳನ್ನು ಗುರುತಿಸಿ ಶೀಘ್ರವೇ ಶಿಕ್ಷೆ ನೀಡಬೇಕೆಂದು ಗೌತಮ್ ಲಹಿರಿ ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com