ಭಯೋತ್ಪಾದನೆಗೆ ಆರ್ಥಿಕ ನೆರವು: ದೆಹಲಿ, ಕಾಶ್ಮೀರದ ಹಲವೆಡೆ ಎನ್ಐಎ ದಾಳಿ

ಭಾರತದಲ್ಲಿ ಭಯೋತ್ಪಾದನಾ ಕೃತ್ಯವೆಸಗಲು ಪಾಕಿಸ್ತಾನ ಕಾಶ್ಮೀರದಲ್ಲಿರುವ ಪ್ರತ್ಯೇಕತಾವಾದಿಗಳಿಗೆ ಆರ್ಥಿಕ ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ರಾಜಧಾನಿ ದೆಹಲಿ ಸೇರಿದಂತೆ ಕಾಶ್ಮೀರದ ಹಲವೆಡೆ ಏಕಕಾಲದಲ್ಲಿ...
ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರೀಯ ತನಿಖಾ ದಳದ ಕಚೇರಿ(ಸಂಗ್ರಹ ಚಿತ್ರ)
ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರೀಯ ತನಿಖಾ ದಳದ ಕಚೇರಿ(ಸಂಗ್ರಹ ಚಿತ್ರ)
Updated on
ಶ್ರೀನಗರ: ಭಾರತದಲ್ಲಿ ಭಯೋತ್ಪಾದನಾ ಕೃತ್ಯವೆಸಗಲು ಪಾಕಿಸ್ತಾನ ಕಾಶ್ಮೀರದಲ್ಲಿರುವ ಪ್ರತ್ಯೇಕತಾವಾದಿಗಳಿಗೆ ಆರ್ಥಿಕ ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ರಾಜಧಾನಿ ದೆಹಲಿ ಸೇರಿದಂತೆ ಕಾಶ್ಮೀರದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸುತ್ತಿದೆ ಎಂದು ಬುಧವಾರ ತಿಳಿದುಬಂದಿದೆ. 
ದೆಹಲಿ ಹಾಗೂ ಕಾಶ್ಮೀರದ ಒಟ್ಟು 16 ಪ್ರದೇಶಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಕಾರ್ಯಾಚರಣೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. 
ಶ್ರೀನಗರದ 6 ಕಡೆಗಳಲ್ಲಿ ಹಾಗೂ ರಾಜಧಾನಿ ದೆಹಲಿ 5 ಪ್ರದೇಶಗಳಲ್ಲಿ ಎನ್ಐಎ ಅಧಿಕಾರಿಗಳು ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಎನ್ಐಎ ಇಬ್ಬರು ವ್ಯಕ್ತಿಗಳನ್ನು ಬಂಧನಕ್ಕೊಳಪಡಿಸಿದ್ದರು. ಬಂಧಿತ ಇಬ್ಬರ ಪೈಕಿ ಓರ್ವ ಛಾಯಾಚಿತ್ರ ಪತ್ರಕರ್ತರಾಗಿದ್ದಾರೆ. ಈತ ಕಲ್ಲು ತೂರಾಟದಲ್ಲಿ ಭಾಗಿಯಾಗಿದ್ದು, ಭದ್ರತಾ ಪಡೆದಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಜನರನ್ನು ಎತ್ತಿಕಟ್ಟಲು ಯತ್ನಿಸುತ್ತಿದ್ದ ಎಂದು ಹೇಳಲಾಗುತ್ತಿತ್ತು. ಈ ಹಿಂದೆ ಪ್ರಕರಣ ಸಂಬಂಧ ಎನ್ಐಎ  7 ಮಂದಿಯನ್ನು ಬಂಧನಕ್ಕೊಳಪಡಿಸತ್ತು. ಬಂಧಿತರು ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸಲು ಪಾಕಿಸ್ತಾನದ ಮೂಲದ ಭಯೋತ್ಪಾದನಾ ಸಂಘಟನೆಗಳಿಂದ ಹಣ ಪಡೆದುಕೊಳ್ಳುತ್ತಿದ್ದಾರೆಂದು ಆರೋಪ ಕೇಳಿಬಂದಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com