ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಿಬಿಐಗೆ ನೀಡಲು ಸಿದ್ಧ: ಸಿದ್ದರಾಮಯ್ಯ

ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 
ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣವನ್ನು ಸಿಬಿಐ ಗೆ ವಹಿಸಲು ಸರ್ಕಾರ ಸಿದ್ಧವಿದೆ. ಸಿಬಿಐ ಗೆ ವಹಿಸುವುದಿಲ್ಲ ಎಂದು ನಾವು ಹೇಳಿಲ್ಲ. ಗೌರಿ ಲಂಕೇಶ್ ಅವರ ಕುಟುಂಬದವರು ಒತ್ತಾಯಿಸಿದರೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಿದ್ಧ ಎಂದು ಹೇಳಿದ್ದಾರೆ. 
ಇದೇ ವೇಳೆ ಗೌರಿ ಅವರು ಸಂಘ ಪರಿವಾರದ ಅವಹೇಳನ ಮಾಡದೇ ಹೋಗಿದ್ದರೆ ಹತ್ಯೆ ಆಗುತ್ತಿರಲಿಲ್ಲ ಎಂದು ಶಾಸಕ ಜೀವರಾಜ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಜೀವರಾಜ್ ಅವರ ಹೇಳಿಕೆಯ ಅರ್ಥವೇನು? ಇದರಿಂದ ಗೌರಿ ಲಂಕೇಶ್ ಅವರ ಹತ್ಯೆ ಹಿಂದೆ ಯಾರಿದ್ದಾರೆ ಎಂಬುದು ಅರ್ಥವಾಗುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com