ಅಧಿಕಾರ ಸ್ವೀಕಾರ ಬೆನ್ನಲ್ಲೇ ಮಾಜಿ ಯೋಧರಿಗಾಗಿ 13 ಕೋಟಿ ರು. ಬಿಡುಗಡೆಗೊಳಿಸಿದ ನಿರ್ಮಲಾ

ದೇಶದ ನೂತನ ರಕ್ಷಣಾ ಸಚಿವೆಯಾಗಿ ಅಧಿಕಾರ ಸ್ವೀಕರಿಸಿರುವ ನಿರ್ಮಲಾ ಸೀತಾರಾಮನ್ ಅವರು ಅಧಿಕಾರ ವಹಿಸಿಕೊಂಡ ತಕ್ಷಣವೇ 13 ಕೋಟಿ ರುಪಾಯಿ ಬಿಡುಗಡೆ...
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
ನವದೆಹಲಿ: ದೇಶದ ನೂತನ ರಕ್ಷಣಾ ಸಚಿವೆಯಾಗಿ ಅಧಿಕಾರ ಸ್ವೀಕರಿಸಿರುವ ನಿರ್ಮಲಾ ಸೀತಾರಾಮನ್ ಅವರು ಅಧಿಕಾರ ವಹಿಸಿಕೊಂಡ ತಕ್ಷಣವೇ 13 ಕೋಟಿ ರುಪಾಯಿ ಬಿಡುಗಡೆ ಮಾಡಿದ್ದಾರೆ. 
ಮಾಜಿ ಯೋಧರು ಹಾಗೂ ಹುತಾತ್ಮ ಯೋಧರ ಮೇಲೆ ಅವಲಂಬಿತರಾಗಿರುವ ಕುಟುಂಬ ಸದಸ್ಯರಿಗೆ ಈ ಪರಿಹಾರ ಹಣ ಸಿಗಲಿದೆ. ಇನ್ನು ದೇಶದ ಮೊದಲ ಪೂರ್ಣಾವಧಿ ರಕ್ಷಣಾ ಸಚಿವೆಯಾಗಿರುವ ನಿರ್ಮಲಾ ಸೀತರಾಮನ್ ಅವರು ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವ ಭರವಸೆ ನೀಡಿದ್ದಾರೆ. 
ಗೋವಾ ರಾಜ್ಯ ಮುಖ್ಯಮಂತ್ರಿಯಾದ ಬಳಿಕ ಮನೋಹರಿ ಪರಿಕ್ಕರ್ ಅವರು ರಕ್ಷಣಾ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದರು. ಬಳಿಕ ಅರುಣ್ ಜೇಟ್ಲಿಯವರಿಗೆ ರಕ್ಷಣಾ ಖಾತೆ ಹೆಚ್ಚುವರಿ ಹೊಣೆಯನ್ನು ವಹಿಸಲಾಗಿತ್ತು. 
3 ದಶಕಗಳ ಹಿಂದೆ ಇಂದಿರಾಗಾಂಧಿ ಪ್ರಧಾನಮಂತ್ರಿ ಹುದ್ದೆಯೊಂದಿಗೆ ರಕ್ಷಣಾ ಇಲಾಖೆಯ ಜವಾಬ್ದಾರಿಯನ್ನೂ ಹೊಂದಿದ್ದರು. ಇದೀಗ ನಿರ್ಮಲಾ ಸೀತಾರಾಮನ್ ಅವರು ಪೂರ್ಣಾವಧಿ ರಕ್ಷಣಾ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. 
ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ ಸೀತಾರಾಮನ್ ಅವರು, ಶಸ್ತ್ರಾಸ್ತ್ರ ಪಡೆಗಳ ಉನ್ನತಿಗಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆಯನ್ನು ನೀಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com