ಕಾಶ್ಮೀರ ವಿಚಾರದಲ್ಲಿ ಸಂಬಂಧಪಟ್ಟ ಎಲ್ಲರೊಂದಿಗೆ ಮಾತುಕತೆಗೆ ಸಿದ್ಧ: ರಾಜನಾಥ್ ಸಿಂಗ್
ಜಮ್ಮು-ಕಾಶ್ಮೀರಕ್ಕೆ ನಾಲ್ಕು ದಿನಗಳ ಭೇಟಿ ನೀಡುವುದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದ್ದು ಕಾಶ್ಮೀರ ವಿಚಾರದಲ್ಲಿ ಸಂಬಂಧಪಟ್ಟ ಎಲ್ಲರೊಂದಿಗೂ ಮಾತುಕತೆಗೆ ಸಿದ್ಧ ಎಂದಿದ್ದಾರೆ.
ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನಾಲ್ಕು ದಿನಗಳ ಭೇಟಿ ನೀಡುವುದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದ್ದು ಕಾಶ್ಮೀರ ವಿಚಾರದಲ್ಲಿ ಸಂಬಂಧಪಟ್ಟ ಎಲ್ಲರೊಂದಿಗೂ ಮಾತುಕತೆಗೆ ಸಿದ್ಧ ಎಂದಿದ್ದಾರೆ.
ಸಂಬಂಧಪಟ್ಟವರೊಂದಿಗೆ ನಾನು ಖುದ್ದಾಗಿ ಮಾತನಾಡುತ್ತೇನೆ, ಯಾರೇ ಬಂದರೂ ಅವರೊಂದಿಗೆ ಮಾತುಕತೆಗೆ ಸಿದ್ಧವಿದ್ದೇನೆ, ಕೇಂದ್ರ ಸರ್ಕಾರ ಕಾಶ್ಮೀರ ವಿಷಯವನ್ನು ಬಗೆಹರಿಸುವ ಉದ್ದೇಶ ಹೊಂದಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಸೆ.09 ರಂದು ಜಮ್ಮು-ಕಾಶ್ಮೀರಕ್ಕೆ ತೆರಳಲಿದ್ದಾರೆ.
ರಾಜನಾಥ್ ಸಿಂಗ್ ಅವರೊಂದಿಗೆ ಗೃಹ ಇಲಾಖೆಯ ನೂತನ ಕಾರ್ಯದರ್ಶಿ ರಾಜೀವ್ ಗೌಬಾ ಸಹ ಕಾಶ್ಮೀರಕ್ಕೆ ತೆರಳಲಿದ್ದಾರೆ.