ರೋಹಿಂಗ್ಯಾ ಮುಸ್ಲಿಮರ ವಿಚಾರಕ್ಕೆ ಘರ್ಷಣೆ: ಅನಂತ್ ನಾಗ್ ನಲ್ಲಿ 6 ಪೊಲೀಸರಿಗೆ ಗಾಯ

ರೋಹಿಂಗ್ಯಾ ಮುಸ್ಲಿಮರ ವಿಚಾರವಾಗಿ ನಡೆದ ಘರ್ಷಣೆಯಲ್ಲಿ ಪ್ರತಿಭಟನಾಕಾರರು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಆರು ಪೊಲೀಸ್ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ರೋಹಿಂಗ್ಯಾ ಮುಸ್ಲಿಮರ ವಿಚಾರವಾಗಿ ನಡೆದ ಘರ್ಷಣೆಯಲ್ಲಿ ಪ್ರತಿಭಟನಾಕಾರರು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಆರು ಪೊಲೀಸ್ ಸಿಬ್ಬಂದಿ ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಅನಂತ್ ನಾಗ್ ನಲ್ಲಿ ನಡೆದಿದೆ.
ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಕೆಲ ಗಲಭೆ ಕೋರರು ಪೊಲೀಸರ ಬುಲೆಟ್ ಪ್ರೂಫ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ, ಜೊತೆಗೆ ಡೆಪ್ಯುಟಿ ಸೂಪರಿಂಡೆಂಟ್ ಪೊಲೀಸ್ ಮೊಹಮದ್ ಯೂಸೂಫ್ ಅವರನ್ನು ಥಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ ಪೊಲೀಸ್ ಅಧಿಕಾರಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರದ ಪ್ರಾರ್ಥನೆ ನಂತರ, ಮ್ಯಾನ್ಮಾರ್ ನಲ್ಲಿರುವ ರೋಹಿಂಗ್ಯಾ ಮುಸ್ಲಿಮರ  ಮೇಲೆ ನಡೆಯುತ್ತಿರುವ ಕಿರುಕುಳ ಖಂಡಿಸಿ ನಡೆದ ಪ್ರತಿಭಟನೆ ಘರ್ಷಣೆಗೆ ತಿರುಗಿತು. ಗುಂಪು ಗೂಡಿದ್ದ ಪ್ರತಿಭಟನಾಕಾರರನ್ನು ಚದುರಿಸುವ ವೇಳೆ ಹಿಂಸಾಚಾರ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಆರು ಮಂದಿ ಪೊಲೀಸರು ಗಾಯಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com