ನವದೆಹಲಿ: ಅಫ್ಘನಿಸ್ತಾನ ವಿದೇಶಾಂಗ ಸಚಿವ ಸಲಾಹುದ್ದೀನ್ ರಬ್ಬಾನಿ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಫ್ಘಾನಿಸ್ತಾನಕ್ಕೆ ಸಂಬಂಧಿಸಿದ ಹೊಸ ನೀತಿಯನ್ನು ಬಿಡುಗಡೆ ಮಾಡಿರುವ ಬೆನ್ನಲ್ಲೇ ಅಫ್ಘಾನಿಸ್ತಾನ ವಿದೇಶಾಂಗ ಸಚಿವರು ಭಾರತಕ್ಕೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ.
ಅಫ್ಘಾನಿಸ್ತಾನಕ್ಕೆ ಸಂಬಂಧಿಸಿದಂತೆ ನೂತನ ನೀತಿಯನ್ನು ಪ್ರಕಟಿಸಿದ್ದ ಡೊನಾಲ್ಡ್ ಟ್ರಂಪ್, ಭಾರತದ ಸಹಾಯ ಅಗತ್ಯವೆಂದು ಹೇಳಿದ್ದರು.