ಮೋದಿ ಭಾಷಣದ ನೇರ ಪ್ರಸಾರವನ್ನು ನಿರ್ಲಕ್ಷಿಸಿ; ವಿಶ್ವವಿದ್ಯಾಲಯಗಳಿಗೆ ಪಶ್ಚಿಮ ಬಂಗಾಳ ಸರ್ಕಾರ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾಷಣದ ನೇರಪ್ರಸಾಜ ಮಾಡುವ ಯೋಜನೆಯನ್ನು ನಿರ್ಲಕ್ಷಿಸುವ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರಕ್ಕೆ ಸೆಡ್ಡುಹೊಡೆದಿದೆ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಕೋಲ್ಕತಾ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾಷಣದ ನೇರಪ್ರಸಾಜ ಮಾಡುವ ಯೋಜನೆಯನ್ನು ನಿರ್ಲಕ್ಷಿಸುವ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರಕ್ಕೆ ಸೆಡ್ಡುಹೊಡೆದಿದೆ. 
ಪಂಡಿತ್ ದೀನ ದಯಾಳ ಉಪಾಧ್ಯಾಯರ 125 ನೇ ಜನ್ಮ ದಿನಾಚರಣೆ ಹಾಗೂ ಸ್ವಾಮಿ ವಿವೇಕಾನಂದರು ವಿಶ್ವಧರ್ಮ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ್ದರ ನೆನಪಿನ ಅಂಗವಾಗಿ ಸೆ.11 ರಂದು ಪ್ರಧಾನಿ ನರೇಂದ್ರ ಮೋದಿ ಯಂಗ್ ಇಂಡಿಯಾ, ನ್ಯೂ ಇಂಡಿಯಾ ಎಂಬ ಥೀಮ್ ನ ಅಡಿಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಲಿದ್ದು, ವಿದ್ಯಾರ್ಥಿಗಳಿಗೆ 'ಸಂಕಲ್ಪ್ ಸೇ ಸಿದ್ಧಿ' ಪ್ರತಿಜ್ಞೆಯನ್ನು ಬೋಧಿಸಲಿದ್ದಾರೆ. 
ಈ ಹಿನ್ನಲೆಯಲ್ಲಿ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳು ನೇರಪ್ರಸಾರ ಮಾಡಬೇಕೆಂದು ನಿರ್ದೇಶಿಸಿ ಯುಜಿಸಿ ದೇಶದ 40,000 ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಿಗೆ ಸುತ್ತೋಲೆಯನ್ನು ಕಳುಹಿಸಿದೆ. ಆದರೆ, ಕೇಂದ್ರದ ಈ ಯೋಜನೆಗೆ ಸೆಡ್ಡು ಹೊಡೆದಿರುವ ಪಶ್ಚಿಮ ಬಂಗಾಳ ಸರ್ಕಾರ ಯುಜಿಸಿ ನಿರ್ದೇಶನವನ್ನು ನಿರ್ಲಕ್ಷಿಸುವಂತೆ ರಾಜ್ಯದ ಕಾಲೇಜು ಹಾಗೂ ವಿವಿಗಳಿಗೆ ತಿಳಿಸಿದೆ. 
ರಾಜ್ಯ ಸರ್ಕಾರಗಳೊಂದಿಗೆ ಸಮಾಲೇಚನೆ ನಡೆಸದೆಯೇ ಕೇಂದ್ರ ಸರ್ಕಾರ ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳುವಂತಿಲ್ಲ. ಇದು ಶಿಕ್ಷಣವನ್ನು ಕೇಸರಿಕರಣಗೊಳಿಸುವ ಹುನ್ನಾರವಾಗಿದೆ ಎಂದು ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಪಾರ್ಥ ಚಚರ್ಜಿಯವರು ಹೇಳಿದ್ದಾರೆ.
ಯುಜಿಸಿ ಸುತ್ತೋಲೆಯಿಂದ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಿಗೆ ಆಶ್ಚರ್ಯವಾಗಿದೆ. ಕೇಂದ್ರ ಯೋಜನೆ ಕುರಿತಂತೆ ಯುಜಿಸಿ ನಮ್ಮನ್ನು ಸಂಪರ್ಕಿಸುತ್ತಿದ್ದಾರೆ. ಯುಜಿಸಿಯ ಈ ನಿರ್ದೇಶನವನ್ನು ಪಾಲಿಸುವುದು ಕಡ್ಡಾಯವೇನಲ್ಲ ಎಂದು ಅವರಿಗೆ ತಿಳಿಸಿದ್ದೇವೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com