ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಪೊಲೀಸರನ್ನು ಗುರಿಯಾಗಿರಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಓರ್ವ ಪೊಲೀಸ್ ಪೇದೆ ಹುತಾತ್ಮರಾಗಿದ್ದಾರೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನಾಲ್ಕು ದಿನಗಳ ಭೇಟಿಗಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ಆಗಮಿಸಿದ್ದು ಅವರು ನಾಳೆ ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮ ಜರುಗುವ 500 ಮೀಟರ್ ದೂರದಲ್ಲಿ ಈ ಗುಂಡಿನ ದಾಳಿ ನಡೆದಿದ್ದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ಪೊಲೀಸ್ ಪೇದೆ ಹುತಾತ್ಮರಾಗಿದ್ದು ಮತ್ತಿಬ್ಬರಿಗೆ ಗಾಯವಾಗಿದೆ. ಉಗ್ರರ ಗುಂಡಿನ ದಾಳಿ ಬಳಿಕ ಸ್ಥಳದಲ್ಲಿ ಹೆಚ್ಚಿನ ಭದ್ರತೆ ಒದಗಿಸಿದ್ದು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.