ಕಾಶ್ಮೀರಿಗಳಲ್ಲಿ ವಿಶ್ವಾಸ ಮೂಡಿಸುವ ಪ್ರಯತ್ನ: ರಾಜನಾಥ್ ಸಿಂಗ್ 4 ದಿನಗಳ ಕಾಶ್ಮೀರ ಭೇಟಿ

Published On :
ನವದೆಹಲಿ: ಗೃಹ ಸಚಿವ ರಾಜನಾಥ್ ಸಿಂಗ್ ಅವರು ನಾಲ್ಕು ದಿನಗಳ ಭೇಟಿಯ ಸಲುವಾಗಿ ಇಂದು ಕಾಶ್ಮೀರಕ್ಕೆ ತೆರಳಿದ್ದಾರೆ.
ಈ ಸಂದರ್ಭದಲ್ಲಿ ಅವರು ನಾಗರಿಕ ಸಮಾಜದ ಸದಸ್ಯರು, ರಾಜಕೀಯ ಹಾಗೂ ಸಾಮಾಜಿಕ ಸಂಘಟನೆಗಳ ನಾಯಕರು, ಹಾಗೂ ಉದ್ಯಮ ರಂಗದ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಕಾಶ್ಮೀರ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ "ನ ಗಾಲೀ ಸೇ, ನ ಗೋಲೀ ಸೇ, ಸಮಸ್ಯಾ ಸುಲ್‌ಝೇಗಿ ಗಲೇ ಲಗಾನೇ ಸೇ'" ಎಂದು ಹೇಳಿದ್ದರು.
ಇದೀಗ ಮೋದಿ ಅವರ ಆಶಯದ ಪ್ರಕಾರ ರಾಜನಾಥ್ ಸಿಂಗ್ ಕಾಶ್ಮೀರದ ಜನರಲ್ಲಿ ವಿಶ್ವಾಸ ವೃದ್ದಿ ಪ್ರಯತ್ನದ ಅಂಗವಾಗಿ ನಾಲ್ಕು ದಿನಗಳ ಭೇಟಿ ಕೈಗೊಂಡಿರುವುದು ಗಮನಾರ್ಹವಾಗಿದೆ.
ಕೇಂದ್ರ ಸಚಿವರೊಡನೆ ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ಮತ್ತು ಹಿರಿಯ ಸಚಿವಾಲಯ ಅಧಿಕಾರಿಗಳು ಸಹ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದಾರೆ.
ನಾಳೆ ರಾಜನಾಥ್ ಅವರು ಜಮ್ಮು ಮತ್ತು ಶ್ರೀನಗರದಲ್ಲಿ ಹಲವಾರು ನಿಯೋಗಗಳನ್ನು ಭೇಟಿಯಾಗಲಿದ್ದಾರೆ. ಮಾತ್ರವಲ್ಲದೆ ಸಿಆರ್ ಪಿಎಫ್, ಬಿಎಸ್ ಎಫ್ ಮತ್ತು ಪೊಲೀಸ್ ಜವಾನರೊಂದಿಗೆ ಮಾತುಕತೆ, ಸಂವಾದ ನಡೆಸಲಿದ್ದಾರೆ. ಶ್ರೀನಗರದಲ್ಲಿ ಕಾಲೇಜು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಜತೆಗೆ ಸಂವಾದ ನಡೆಸಲಿದ್ದಾರೆ.
ಸಚಿವರು ರಾಜ್ಯಪಾಲ ಎನ್ ಎನ್ ವೋರಾ ಮತ್ತು ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರನ್ನು ಕೂಡ ಇದೇ ಸಮಯದಲ್ಲಿ ಭೇಟಿಯಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


