ಇಸ್ಲಾಮಿಕ್ ಸ್ಟೇಟ್ ಜತೆ ನಂಟು: ಹೈದರಾಬಾದ್‍ನಲ್ಲಿ ಮೂವರ ಬಂಧನ

ಜಗತ್ತಿನಾದ್ಯಂತ ವಿದ್ವಂಸಕ ಕೃತ್ಯಗಳನ್ನು ನಡೆಸುವ ಮೂಲಕ ಕುಖ್ಯಾತಿ ಗಳಿಸಿರುವ ಇಸ್ಲಾಮಿಕ್ ಸ್ಟೇಟ್(ಇಸಿಸ್) ಉಗ್ರ ಸಂಘಟನೆ ಜತೆ ನಂಟು ಹೊಂದಿದ್ದಾರೆ ಎಂಬ...
ಹೈದರಾಬಾದ್ ಪೊಲೀಸರು
ಹೈದರಾಬಾದ್ ಪೊಲೀಸರು
Updated on: 
ಹೈದರಾಬಾದ್: ಜಗತ್ತಿನಾದ್ಯಂತ ವಿದ್ವಂಸಕ ಕೃತ್ಯಗಳನ್ನು ನಡೆಸುವ ಮೂಲಕ ಕುಖ್ಯಾತಿ ಗಳಿಸಿರುವ ಇಸ್ಲಾಮಿಕ್ ಸ್ಟೇಟ್(ಇಸಿಸ್) ಉಗ್ರ ಸಂಘಟನೆ ಜತೆ ನಂಟು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. 
ನಗರದ ತೊಲಿ ಚೌಕಿ ಪ್ರದೇಶದಲ್ಲಿ ಮೂವರನ್ನು ಬಂಧಿಸಲಾಗಿದ್ದು ಅದರಲ್ಲಿ ಇಬ್ಬರು ಅಪ್ರಾಪ್ತರೆಂದು ಪೊಲೀಸರು ತಿಳಿಸಿದ್ದು ಇಸಿಸ್ ಜತೆಗಿನ ನಂಟಿನ ಕುರಿತು ಪ್ರಶ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ಉತ್ತರಪ್ರದೇಶದಿಂದ ಆಗಮಿಸಿರುವ ಪೊಲೀಸರು ಮೂವರನ್ನು ಅಜ್ಞಾತ ಸ್ಥಳದಲ್ಲಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಕಳೆದ ಜೂನ್ ನಲ್ಲಿ ಪೊಲೀಸರು 22 ವರ್ಷದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗೆ ಯುವಕನ್ನು ಸೇರಿಸುತ್ತಿದ್ದ ಉಗ್ರನನ್ನು ಬಂಧಿಸಿತ್ತು.
ಇನ್ನು ಕಳೆದ ವರ್ಷ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಇಸ್ಲಾಮಿಕ್ ಸ್ಟೇಟ್ ಜತೆ ನಂಟು ಹೊಂದಿದ್ದ ಆರೋಪದ ಮೇಲೆ ಏಳು ಮಂದಿಯನ್ನು ಬಂಧಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com