ವೃತ್ತಿ ಬದುಕಿಗೆ ವಿದಾಯ ಹೇಳಿದ ಖ್ಯಾತ ವಕೀಲ ರಾಮ್ ಜೇಠ್ಮಲಾನಿ

ದೇಶದ ಹಿರಿಯ ವಕೀಲರಾದ ರಾಮ್ ಜೇಠ್ಮಲಾನಿ ನಿವೃತ್ತಿ ಘೋಷಿಸಿದ್ದಾರೆ.
ರಾಮ್ ಜೇಠ್ಮಲಾನಿ
ರಾಮ್ ಜೇಠ್ಮಲಾನಿ
ನವದೆಹಲಿ: ದೇಶದ ಹಿರಿಯ ವಕೀಲರಾದ ರಾಮ್ ಜೇಠ್ಮಲಾನಿ ನಿವೃತ್ತಿ ಘೋಷಿಸಿದ್ದಾರೆ. 
ಸುಮಾರು ಏಳು ದಶಕಗಳ ಕಾಲ ವಿವಿಧ ಹಂತರ ನ್ಯಾಯಾಲಯಗಳಲ್ಲಿ ಸಮರ್ಥವಾಗಿ ವಾದ ಮಂಡಿಸುತ್ತಿದ್ದ ಜೇಠ್ಮಲಾನಿ ತಮ್ಮ ಸುದೀರ್ಘ ವೃತ್ತಿ ಬದುಕಿಗೆ ಕೊನೆಯ ಷರಾ ಹಾಕಿದ್ದಾರೆ 
ನಿವೃತ್ತಿ ಘೋಷಣೆ ಬಳಿಕ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಹರಿಹಾಯ್ದ ಜೇಠ್ಮಲಾನಿ, "ಯುಪಿಎ ಸರ್ಕಾರದ ಕ್ಕಿಂತಲೂ ಎನ್ ಡಿಎ ಸರ್ಕಾರದ ವೈಫಲ್ಯ ದೊಡ್ಡದು" ಎಂದು ಆರೋಪಿಸಿದರು.
"ಭ್ರಷ್ಟಾಚಾರದ ವಿರುದ್ಧ ನನ್ನ ಹೋರಾಟ ಮುಂದುವರೆಯಲಿದೆ. ಹಿಂದಿನ ಹಾಗೂ ಈಗಿನ ಸರ್ಕಾರಗಳು ದೇಶದ ಪರಿಸ್ಥಿತಿಯನ್ನು ಹದಗೆಡಿಸಲು ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿವೆ" ಎಂದು ವಿಷಾದ ವ್ಯಕ್ತಪಡಿಸಿದರು. 
ಬಾರ್ ಕೌನ್ಸಿಲ್ ಆಫ್ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ  ನೂತನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನು ಸನ್ಮಾನಿಸಿ ಮಾತನಾಡಿದ ರಾಮ್ ಜೇಠ್ಮಲಾನಿ "ನಾನು ನನ್ನ ವೃತ್ತಿಯಿಂದ ಮಾತ್ರವೇ ನಿವೃತ್ತನಾಗುತ್ತಿದ್ದೇನೆ.  ನಾನು ಜೀವಂತ ಇರುವ ತನಕ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಯಲಿದೆ. ಭಾರತ ಉತ್ತಮ ಸ್ಥಿತಿ ಹೊಂದಲು ಶ್ರಮಿಸುತ್ತೇನೆ" ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com