ಆಧಾರ್ ಗೆ ಸಿಮ್ ಕಾರ್ಡ್ ಗಳನ್ನು ಜೋಡಣೆ ಮಾಡಲು ಫೆಬ್ರವರಿ ತಿಂಗಳು ಕೊನೆ

2018, ಫೆಬ್ರವರಿಯೊಳಗೆ ಆಧಾರ್ ಸಂಖ್ಯೆಗೆ ಜೋಡಣೆಯಾಗದ ಮೊಬೈಲ್ ಸಿಮ್ ಕಾರ್ಡುಗಳನ್ನು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: 2018, ಫೆಬ್ರವರಿಯೊಳಗೆ ಆಧಾರ್ ಸಂಖ್ಯೆಗೆ ಜೋಡಣೆಯಾಗದ ಮೊಬೈಲ್ ಸಿಮ್ ಕಾರ್ಡುಗಳನ್ನು ರದ್ದುಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಮುಂದಿನ ವರ್ಷ ಫೆಬ್ರವರಿ ತಿಂಗಳೊಳಗೆ  ಸಿಮ್ ಕಾರ್ಡ್ ಗೆ ಆಧಾರ್ ಸಂಖ್ಯೆ ಜೋಡಣೆಯಾಗದ ಎಲ್ಲ ಫೋನ್ ನಂಬರ್ ಗಳನ್ನು ರದ್ದುಗೊಳಿಸಲು ಸರ್ಕಾರ ತೀರ್ಮಾನಿಸಿದೆ.
ಆದೇಶ ನೀಡಿದ ಒಂದು ವರ್ಷದೊಳಗೆ ಮೊಬೈಲ್ ಫೋನ್ ಸಂಖ್ಯೆಗಳಿಗೆ ಆಧಾರ್ ಜೋಡಣೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಈ ವರ್ಷ ಫೆಬ್ರವರಿಯಲ್ಲಿ ತೀರ್ಪು ನೀಡಿತ್ತು.
ಲೋಕನೀತಿ ಫೌಂಡೇಶನ್ ಎಂಬ ಸ್ವಯಂ ಸೇವಾ ಸಂಸ್ಥೆ ಹೂಡಿದ್ದ ಅರ್ಜಿ ವಿಚಾರಣೆ ನ ಡೆಸಿದ ನ್ಯಾಯಾಲಯ ಈ ತೀರ್ಪು ಪ್ರಕಟಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com