ವಿಕೆ ಶಶಿಕಲಾ ಪತಿ ನಟರಾಜನ್ ಆರೋಗ್ಯ ಗಂಭೀರ, ಆಸ್ಪತ್ರೆಗೆ ದಾಖಲು

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜೈಲು ಶಿಕ್ಷೆಗೆ ಗುರಿಯಾಗಿರುವ ಜಯಾ ಆಪ್ತೆ ವಿಕೆ ಶಶಿಕಲಾ ಅವರ ಪತಿಯ ಆರೋಗ್ಯ ಗಂಭೀರವಾಗಿದ್ದು, ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜೈಲು ಶಿಕ್ಷೆಗೆ ಗುರಿಯಾಗಿರುವ ಜಯಾ ಆಪ್ತೆ ವಿಕೆ ಶಶಿಕಲಾ ಅವರ ಪತಿಯ ಆರೋಗ್ಯ ಗಂಭೀರವಾಗಿದ್ದು, ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು  ತಿಳಿದುಬಂದಿದೆ.

ಮೂಲಗಳ ಪ್ರಕಾರ ಶಶಿಕಲಾ ಅವರ ಪತಿ ಎಂ ನಟರಾಜನ್ ಅವರ ಯಕೃತ್ತು ಮತ್ತು ಮೂತ್ರಪಿಂಡಗಳೆರಡೂ ವಿಫಲವಾಗಿದ್ದು, ಗಂಭೀರವಾಗಿರುವ ಅವರನ್ನು ಚೆನ್ನೈನ ಗ್ಲೆನಿಗಲ್ಸ್ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲು  ಮಾಡಲಾಗಿದೆ. ಇದಲ್ಲದೆ ನಟರಾಜನ್ ಅವರು ಶ್ವಾಸಕೋಶದ ಸೋಂಕಿನಿಂದಲೂ ಬಳಲುತ್ತಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಲೆ ನೀಡಲಾಗುತ್ತಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com