ಕುಲ್ಗಾಮ್ ಎನ್'ಕೌಂಟರ್: ಹಿಜ್ಬುಲ್ ಸಂಘಟನೆಯ ಇಬ್ಬರು ಉಗ್ರರ ಹತ್ಯೆ, ಓರ್ವ ಬಂಧನ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಸೋಮವಾರ ತಿಳಿದುಬಂದಿದೆ. 
ಕುಲ್ಗಾಂನ ಖುದ್ವಾನಿ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ತಿಳಿದುಬಂದ ಹಿನ್ನಲೆಯಲ್ಲಿ ಸೇನಾಪಡೆ ಕಾರ್ಯಾಚರಣೆಗಿಳಿದಿತ್ತು. ಸೇನಾಪಡೆ ಕಾರ್ಯಾಚರಣೆ ನಡೆಸುತ್ತಿದ್ದಂತೆಯೇ ಉಗ್ರರು ಯೋಧರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. 
ಈ ವೇಳೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿರುವ ಸೇನಾಪಡೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. ಅಲ್ಲದೆ, ಓರ್ವ ಉಗ್ರನನ್ನು ಬಂಧನಕ್ಕೊಳಪಡಿಸಿದೆ. ಹತ್ಯೆಯಾದ ಉಗ್ರರನ್ನು ದಾವೂದ್ ಅಹ್ಮದ್ ಅಲಿ ಹಾಗೂ ಶೈಯಾರ್ ಅಹ್ಮದ್ ವಾನಿ ಎಂದು ಗುರ್ತಿಸಲಾಗಿದೆ. ಬಂಧನಕ್ಕೊಳಗಾಗಿರುವ ಉಗ್ರನನ್ನು ಆರೀಫ್ ಸೊಫಿ ಎಂದು ಗುರ್ತಿಸಲಾಗಿದೆ. ಕಾರ್ಯಾಚರಣೆ ವೇಳೆ ಸೇನಾಪಡೆ 1 ಎಕೆ47 ಮತ್ತು 1 ಇನ್ಸಾಫ್ ರೈಫಲ್ ನ್ನು ವಶಕ್ಕೆ ಪಡೆದುಕೊಂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com