ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಅಂಗಡಿಗೆ ಒಂದು ಪಾಕೇಟ್ ಹಾಲು ತರಲು ಹೋಗಿದ್ದ ಬಾಲಕಿಯನ್ನು ಹೆಲ್ಮೆಟ್ ಧರಿಸಿದ್ದ ಯುವಕನೊಬ್ಬ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಬಾಲಕಿಯನ್ನು ಮನೆ ಬಳಿ ತಂದು ಬಿಟ್ಟು ಪರಾರಿಯಾಗಿದ್ದಾನೆ. ಮಗಳು ಬೇಗ ಮನೆಗೆ ವಾಪಸ್ ಬರದ ಹಿನ್ನಲೆಯಲ್ಲಿ ಆತಂಕಗೊಂಡ ಪೋಷಕರು ಬಾಲಕಿಗಾಗಿ ಹುಡುಕಾಟ ನಡೆಸಿದ್ದಾರೆ. ಸ್ವಲ್ಪ ಸಮಯದ ನಂತರ ಅಳುತ್ತಾ ಬರುತ್ತಿದ್ದ ಮಗಳ ಮಾತು ಕೇಳಿ ಪೋಷಕರಿಗೆ ಆಘಾತವಾಗಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಪೊಲೀಸರಿಗೆ ದೂರು ನೀಡಿದ್ದಾರೆ.