ಶಾಲಾ ಬಾಲಕನ ಹತ್ಯೆ ಪ್ರಕರಣವನ್ನು ಹರ್ಯಾಣ ಸರ್ಕಾರದ ಮೂವರು ಎಸ್ ಐಟಿ ಅಧಿಕಾರಿಗಳ ತಂಡ ತನಿಖೆ ನಡೆಸುತ್ತಿದ್ದು, ಈಗಾಗಲೇ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಅಂತೆಯೇ ಪ್ರಕರಣದ ತನಿಖೆ ಮುಂದುವರೆದಿದ್ದು, ಶಾಲೆಯಲ್ಲಿ ಮಕ್ಕಳಿಗೆ ಸೂಕ್ತ ಭದ್ರತೆ ಇರಲಿಲ್ಲ ಎಂಬ ಗಂಭೀರ ವಿಚಾರವನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ. ಇದೇ ಕಾರಣಕ್ಕೆ ಶಾಲೆಯ ಮಾಲೀಕರ ವಿರುದ್ಧ ಮಕ್ಕಳ ರಕ್ಷಣಾ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಸ್ವತಃ ಹರ್ಯಾಣ ಸರ್ಕಾರ ಹೇಳಿತ್ತು.